ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 7 ಜನರನ್ನು ವಿಚಾರಣೆಗೆ ಒಳಪಡಿಸಿದ್ದು ಮೂವರ ವಾಯ್ಸ್ ಅನ್ನು ಎಫ್ ಎಸ್ ಎಲ್ ಗೆ ಕಳುಹಿಸಲಾಗಿದೆ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪದ ವಿಚಾರವಾಗಿ ಮಾತನಾಡಿದ ಅವರು ಇನ್ನೂ ಎಫ್ ಎಸ್ ಎಲ್ ವರದಿ ಬರಬೇಕಿದೆ ಅದರಲ್ಲಿ ಒಂದೇ ಒಂದು ಕ್ಲಿಪಿಂಗ್ ಅಲ್ಲ ಸಾಕಷ್ಟು ಕ್ಲಿಪ್ಪಿಂಗ್ ಗಳು ಇವೆ ಎಫ್ಎಸ್ಎಲ್ ವರದಿ ಬಂದ ನಂತರ ಸೂಕ್ತವಾದ ಕ್ರಮ ತೆಗೆದುಕೊಳ್ಳುತ್ತೇವೆ ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಕರೆಸಿ ವಾಯ್ಸ್ ರೆಕಾರ್ಡಿಂಗ್ ಮಾಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ರಾಜ್ಯ ಸರ್ಕಾರಕ್ಕೆ ಜಾತಿಗಣತಿ ವರದಿ ಸಲ್ಲಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಗೃಹ ಇಲಾಖೆಯ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಸಂಪುಟ ನಿರ್ಧಾರದಂತೆ ನಡೆಯೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದತ್ತಾಂಶ ಹೊರಗೆ ಬರುವವರೆಗೂ ಸದ್ಯ ಏನೂ ಹೇಳಲು ಆಗುವುದಿಲ್ಲ ಎಂದು ಬೆಂಗಳೂರಿನಲ್ಲಿ ಗೃಹ ಇಲಾಖೆ ಸಚಿವ ಜಿ ಪರಮೇಶ್ವರ್ ತಿಳಿಸಿದರು.
BREAKING: Paytm, PPBL ವಿವಿಧ ಅಂತರ್-ಕಂಪನಿ ಒಪ್ಪಂದಗಳನ್ನು ಸ್ಥಗಿತಗೊಳಿಸಲು ಪರಸ್ಪರ ಒಪ್ಪಿಗೆ
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿಗೆ ಲಿಂಗಾಯತ ನಾಯಕರ ವಿರೋಧ ವಿಚಾರವಾಗಿ ಮಾತನಾಡಿದ ಅವರು ನಂಬರ್ ಕಡಿಮೆ ಇರಬಹುದು ಎಂಬ ಆತಂಕ ಅವರಿಗೆ ಇರಬಹುದು ಈಗ ನೀಡಿರುವ ವರದಿ ಕಮಿಷನ್ ವರದಿ ಅಂತ ಆಗುತ್ತದೆ ಕಾಂತರಾಜು ವರದಿ ಜಯಪ್ರಕಾಶ್ ಹೆಗಡೆಯ ವರದಿ ಅಂತ ಬರಲ್ಲ ಎಂದು ತಿಳಿಸಿದರು.