ಬೆಂಗಳೂರು : ನಿನ್ನೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ಮೂರು ಜನ ಬಿಜೆಪಿಯ ಒಬ್ಬರು ಜಯಗಳಿಸಿದ್ದು ಮೈತ್ರಿಯ ಅಭ್ಯರ್ಥಿ ಕುಪೇಂದ್ರ ರೆಡ್ಡಿ ತೀವ್ರ ಮುಖಭಂಗ ಎದುರಿಸಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ನ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೇಳಿ ಬಂದಿದೆ ಈ ಕುರಿತಾಗಿ ಸಿಎಂ ಸಿದ್ದರಾಮಯ್ಯ ಈ ಘೋಷಣೆ ಕೂಗಿದವರು ಯಾರು ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ ಘೋಷಣೆ ಕೂಗಿರುವುದು ಸಾಬೀದಾದರೆ ಕ್ರಮ ಕೈಗೊಳ್ಳುತ್ತೇವೆ ಘೋಷಣೆ ಕೂಗಿರುವವರು ಯಾರೇ ಆಗಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಬಗ್ಗೆ ಮೊದಲು ತನಿಖೆ ಆಗಲಿ. ಈಗಾಗಲೇ ಎಫ್ಎಸ್ಎಲ್ ತನಿಖೆಗೆ ಕೊಟ್ಟಿದ್ದೇವೆ. ದೇಶದ್ರೋಹಿಗಳನ್ನು ಮಟ್ಟ ಹಾಕಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು : ಪತಿಗೆ ಬೇರೆ ಮಹಿಳೆಯೊಂದಿಗೆ ‘ಅನೈತಿಕ’ ಸಂಬಂಧ : ನೊಂದ ಪತ್ನಿ ‘ಆತ್ಮಹತ್ಯೆಗೆ’ ಶರಣು