ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದಂತ ಮೂವರು ಆರೋಪಿಗಳನ್ನು ವಿಧಾನಸೌಧ ಠಾಣೆಯ ಪೊಲೀಸರು ಬಂಧಿಸಿದ್ದರು. ಈ ಬಳಿಕ ಮೂವರು ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಇಂತಹ ಆರೋಪಿಗಳಲ್ಲಿ ಇಬ್ಬರಿಗೆ ನ್ಯಾಯಾಂಗ ಬಂಧನ, ಓರ್ವ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಫೆಬ್ರವರಿ.27ರಂದು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬುದಾಗಿ ಘೋಷಣೆ ಕೂಗಿದಂತ ಘಟನೆ ನಡೆದಿತ್ತು. ವಿಧಾನಸೌಧದ ಕಾರಿಡಾರಿನಲ್ಲಿ ನಡೆದಿದ್ದಂತ ಈ ಘಟನೆ ವ್ಯಾಪಕ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಬಳಿಕ ವಿಧಾನಸೌಧದ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿತ್ತು.

ಈ ಘಟನೆ ಸಂಬಂಧ ತನಿಖೆ ನಡೆಸಿದ್ದಂತ ವಿಧಾನಸೌಧ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು.

ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದಂತೆ ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರು ಮೊಹಮ್ಮದ್ ನಾಶಿ ಪುಡಿಯನ್ನು ಪೊಲೀಸ್ ವಶಕ್ಕೆ ನೀಡಿದೆ. ಅಲ್ಲದೇ ಇಲ್ತಾಜ್ ಹಾಗೂ ಮುನಾವರ್ ನನ್ನು ನ್ಯಾಾಯಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಅಂದಹಾಗೇ, ಇಲ್ತಾಜ್, ಮುನಾವರ್, ಮೊಹಮ್ದ್ ನಾಶಿಪುಡಿ ಎಂಬುವರನ್ನು ಬಂಧಿಸಲಾಗಿದೆ ಹಾವೇರಿ ಜಿಲ್ಲೆಯ ಬ್ಯಾಡಗಿಯ ಮೊಹಮ್ಮದ್ ಶಫಿ ನಾಶಿಪುಡಿಯಾಗಿದ್ದರೇ, ಬೆಂಗಳೂರಿನ ಆರ್ ಟಿ ನಗರದ ನಿವಾಸಿ ಮುನಾವರ್ ಆಗಿದ್ದಾರೆ. ಮತ್ತೊಬ್ಬ ಆರೋಪಿ ಇಲ್ತಾಜ್ ದೆಹಲಿ ಮೂಲದವರು ಎಂಬುದಾಗಿ ಕೇಂದ್ರ ವಿಭಾಗದ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದರು.

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ : ನೆಲಮಂಗಲದಲ್ಲಿ ’73 ಭ್ರೂಣ ಹತ್ಯೆ’ ಪ್ರಕರಣ ಬೆಳಕಿಗೆ

ಆಧುನಿಕ ‘ಭಾಗೀರಥಿ’ಯ ಪ್ರಯತ್ನದ ಫಲ : ಅಂಗನವಾಡಿ ಮಕ್ಕಳಿಗೋಸ್ಕರ ಬಾವಿ ತೋಡಿ ನೀರು ತರಿಸಿದ ಗೌರಿ ನಾಯ್ಕ್

Share.
Exit mobile version