ಬೆಂಗಳೂರು: ಮೊನ್ನೆ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿತ್ತು. ಇಂದು ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಬಾಂಬ್ ಸ್ಟೋಗೊಂಡಿದೆ. ಇದರ ಹೊಣೆಯನ್ನು ಹೊತ್ತು ಗೃಹ ಸಚಿವ ಡಾ.ಜಿ ಪರಮೇಶ್ವರ್ ರಾಜೀನಾಮೆ ನೀಡುವಂತೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.
ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆ ನಡೆಸಬೇಕು. ಗ್ರಾಹಕರು ಬಿಟ್ಟುಹೋದ ಚೀಲದಿಂದಾಗಿ ಸ್ಫೋಟ ಸಂಭವಿಸಿದೆಯೇ ಹೊರತು ಯಾವುದೇ ಸಿಲಿಂಡರ್ ಸ್ಫೋಟದಿಂದಲ್ಲ ಎಂದಿದ್ದಾರೆ.
ಕೆಲವು ದಿನಗಳ ಹಿಂದೆ ಕರ್ನಾಟಕ ಕಾಂಗ್ರೆಸ್ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ಸಮರ್ಥಿಸಿಕೊಂಡಿತ್ತು. ಇಂದು ರಾಮೇಶ್ವರಂ ಕಫೆಯಲ್ಲಿ ಬಾಂಬ್ ಬ್ಲಾಸ್ಟ್ ಆಗಿದೆ. ಹೀಗಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಗೃಹ ಸಚಿವ ಪರಮೇಶ್ವರ್ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
Blast in Rameshwaram Cafe, Bengaluru should be investigated by National Investigation Agency.
Blast occurred because of a bag that was left by a customer and not any cylinder explosion.
Few days ago, Karnataka Congress defended those who shouted pro Pakistan slogans.…
— Basanagouda R Patil (Yatnal) (@BasanagoudaBJP) March 1, 2024
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ
‘ರಾಜ್ಯ ಸರ್ಕಾರಿ ನೌಕರ’ರಿಗೆ ಮಹತ್ವದ ಮಾಹಿತಿ: ಪ್ರಥಮ ಅಧಿವೇಶನ ‘ಇಲಾಖಾ ಪರೀಕ್ಷೆ’ಗೆ ಅರ್ಜಿ ಆಹ್ವಾನ