ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದು ನಿಜ , FSL ವರದಿಯಲ್ಲಿ ಇದು ಧೃಡವಾಗಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡುವುದರ ಮೂಲಕ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದರು. ಈ ಬಗ್ಗೆ ತನ್ನ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ರಾಜ್ಯ ಬಿಜೆಪಿ ಘಟಕ ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.
ಮನಸ್ಥಿತಿ ಮತ್ತು ಮನಸ್ಸು: ಸುಗಂಧ ದ್ರವ್ಯ ಖಿನ್ನತೆಯನ್ನು ಗುಣಪಡಿಸಬಹುದು: ಅಧ್ಯಯನ
BREAKING:ಸಾರ್ವಕಾಲಿಕ ಗರಿಷ್ಠ ಮಟ್ಟ 64,000 ಡಾಲರ್ ತಲುಪಿದ ‘ಬಿಟ್ ಕಾಯಿನ್’
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.
ರಾಷ್ಟ್ರ ವಿರೋಧಿ ಧೋರಣೆಯ ಕಾಂಗ್ರೆಸ್ ಹಾಗೂ ಸುಳ್ಳು ಸುದ್ದಿ ಕಾರ್ಖಾನೆಯ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರು ಈಗಲಾದರೂ ತಮ್ಮ ದೇಶದ್ರೋಹದ ಕೃತ್ಯವನ್ನು ಒಪ್ಪಿಕೊಂಡು ವಿಧಾನಸೌಧದ ಎದುರು ಸಾಷ್ಟಾಂಗ ನಮಸ್ಕಾರ ಮಾಡಿ ಕನ್ನಡಿಗರ ಕ್ಷಮೆ ಕೋರಬೇಕು ಅಂತ ಹೇಳಿದೆ.
ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.… pic.twitter.com/sf92Yy43Xv
— BJP Karnataka (@BJP4Karnataka) March 4, 2024