ದಾವಣಗೆರೆ: ನಗರದಲ್ಲಿ ಚಿನ್ನದ ವ್ಯಾಪಾರಿಯೊಬ್ಬರಿಂದ 78 ಗ್ರಾಂ ಚಿನ್ನಾಭರಣವನ್ನು ದರೋಡೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಪ್ರೊಬೇಷನರಿ ಪಿಎಸ್ಐ ಮಾಳಪ್ಪ ಚಿಪ್ಪಲಕಟ್ಟಿಯವರನ್ನು ಸೇವೆಯಿಂದ ವಜಾಗೊಳಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಪೂರ್ವ ವಲಯದ ಐಜಿಪಿ ಬಿಆರ್ ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸಾರ್ವಜನಿಕರಿಗೆ ರಕ್ಷಣೆ ನೀಡೋದು, ನೊಂದವರಿಗೆ ನ್ಯಾಯ ಕೊಡಿಸೋದು ಪೊಲೀಸರ ಮುಖ್ಯ ಕೆಲಸವಾಗಿದೆ. ಇಂತಹ ಜವಾಬ್ದಾರಿಯುತ ಹುದ್ದೆಯಲ್ಲಿ ಇದ್ದುಕೊಂಡೇ ದರೋಡೆ ಕೃತ್ಯವನ್ನು ಎಸಗಿದ್ದು ಮಾತ್ರ ಘೋರ ಅಪರಾಧವಾಗಿದೆ. ಈ ಹಿನ್ನಲೆಯಲ್ಲಿ ಆರೋಪಿ ಮಾಳಪ್ಪ ಚಿಪ್ಪಲಕಟ್ಟಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ.
ಇನ್ನೂ ಮೊದಲ ಆರೋಪಿ ಹಾವೇರಿ ಜಿಲ್ಲೆಯ ಹಂಸಬಾವಿ ಪೊಲೀಸ್ ಠಾಣೆಯ ಪ್ರೊಬೇಷನರಿ ಪಿಎಸ್ಐ ಮಾಳಪ್ಪ ಚಿಪ್ಪಲಹಟ್ಟಿ ಅವರನ್ನು ಸೇವೆಯಿಂದ ವಜಾಗೊಳಿಸಿದದ್ರೇ, ರಾಣೆಬೆನ್ನೂರು ಸಂಚಾರ ಠಾಣೆಯಿಂದ ಶಿವಮೊಗ್ಗ ಜಿಲ್ಲೆಯ ಸಾಗರ ಠಾಣೆಗೆ ವರ್ಗಾವಣೆಗೊಂಡಿದ್ದಂತ ಪ್ರವೀಣ್ ಕುಮಾರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಅಂದಹಾಗೇ ನವೆಂಬರ್.24ರಂದು ಕಾರವಾರದ ಆಭರಣ ತಯಾರಕ ವಿಶ್ವನಾಥ್ ಅರ್ಕಸಾಲಿ ಎಂಬುವರನ್ನು ತಡೆದು 7.5 ಲಕ್ಷ ಮೌಲ್ಯದ ಚಿನ್ನಾಭರಣವನ್ನು ದರೋಡೆ ಮಾಡಲಾಗಿತ್ತು. ಈ ಸಂಬಂಧ ದಾವಣಗೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಇಬ್ಬರು ಪಿಎಸ್ಐ ಸೇರಿದಂತೆ 7 ಆರೋಪಿಗಳನ್ನು ಕೆಟಿಜೆ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಾದ 24 ಗಂಟೆಯಲ್ಲೇ ಬಂಧಿಸಿದ್ದರು.
BREAKING : ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಬಿಟ್ಟುಕೊಡದಿದ್ದರೆ ಸರ್ಕಾರ ಪತನ : ವೀರೇಶ್ವರ ಸ್ವಾಮೀಜಿ ಭವಿಷ್ಯ








