ಬೀದರ್ : ಅಶ್ಲೀಲ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಕೊಟ್ಟವರು ಯಾರು? ಹಾಗಾಗಿ ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಕುರಿತಂತೆ ತನಿಖೆ ಆಗಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ್ ಆಗ್ರಹಿಸಿದರು.

ಬೀದರ್ ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಅಹ್ಮದ್ ಸುಧೀಗಾರರೊಂದಿಗೆ ಮಾತನಾಡಿ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು.ದೇಶದಲ್ಲಿ ದೊಡ್ಡ ಪ್ರಕರಣ ನಡೆದರೂ ಸಹ ಏಕೆ ಖಂಡಿಸಲಿಲ್ಲ? ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ ಏಕೆ ಖಂಡಿಸಲಿಲ್ಲ? ಮಹಿಳೆಯರ ಮೇಲೆ ದೌರ್ಜನ ನಡೆದಾಗ ಖಂಡಿಸಬೇಕು ಎಂದು ಆಗ್ರಹಿಸಿದರು.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಲು ಕ್ಲಿಯರೆನ್ಸ್ ಬೇಕಿತ್ತು. ಕ್ಲಿಯರೆನ್ಸ್ ಕೊಟ್ಟವರು ಯಾರು ಎಂಬುದರ ಬಗ್ಗೆ ತನಿಖೆಯಾಗಬೇಕು. ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇವೆ ಮೋದಿ ಅಮಿತ್ ಶಾ ಘಟನೆ ಖಂಡಿಸದಿರುವುದು ದುರ್ದೈವ ಅಂದು ಇದರಲ್ಲಿ ಕೆಪಿಸಿಸಿ ಕಾರ್ಯಧ್ಯಕ್ಷ ಸಲಿ ಮೊಹಮ್ಮದ್ ತಿಳಿಸಿದರು

Share.
Exit mobile version