ಬೆಂಗಳೂರು: ಅಭಿಮಾನ್ ಸ್ಟುಡಿಯೋದಲ್ಲಿದ್ದಂತ ವಿಷ್ಣುವರ್ಧನ್ ಸ್ಮಾರಕವನ್ನು ನೆಲಸಮ ಮಾಡಲಾಗಿತ್ತು. ಅಭಿಮಾನ್ ಸ್ಟುಡಿಯೋಗೆ ನೀಡಿದ್ದಂತ ಅರಣ್ಯ ಭೂಮಿಯನ್ನು ವಾಪಾಸ್ ಪಡೆಯುವುದಾಗಿಯೂ ತಿಳಿಸಿತ್ತು. ಈ ಬೆನ್ನಲ್ಲೇ ವಿಷ್ಣು ವರ್ಧನ್ ಸ್ಮಾರಕ ನಿರ್ಮಾಣಕ್ಕೆ 15 ಗುಂಟೆ ಜಮೀನು ನೀಡುವಂತೆ ಸ್ಯಾಂಡಲ್ ವುಡ್ ನಿರ್ಮಾಪಕರು ಸಚಿವ ಈಶ್ವರ್ ಖಂಡ್ರೆ ಭೇಟಿಯಾಗಿ ಮನವಿ ಮಾಡಿದ್ದಾರೆ.
ಇಂದು ಚಲನಚಿತ್ರ ನಿರ್ಮಾಪಕರಾದ ಕೆ. ಮಂಜು, ಉಮೇಶ್ ಬಣಕಾರ್ ಮತ್ತಿತರರು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರನ್ನು ಭೇಟಿ ಮಾಡಿ, ದಿವಂಗತ ಡಾ. ವಿಷ್ಣುವರ್ಧನ್ ಸ್ಮಾರಕಕ್ಕೆ ಅಭಿಮಾನ್ ಸ್ಟುಡಿಯೋ ಪ್ರದೇಶದಲ್ಲಿ 15 ಗುಂಟೆ ಜಮೀನು ನೀಡುವಂತೆ ಮನವಿ ಮಾಡಿದರು.
ಮದ್ದೂರು ಗಣೇಶ ಗಲಾಟೆ ಕೇಸ್: ನ್ಯಾಯಾಂಗ ತನಿಖೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹ
BREAKING: ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ.ದಿನೇಶ್ ನೇಮಕ