ಬೆಂಗಳೂರು: ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾಗಿ ಪ್ರೊ.ಹಿ.ಚಿ ಬೋರಲಿಂಗಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಮ್ಯಾನೇಜಿಂಗ್ ಟ್ರಸ್ಟಿ ಆದಂತ ಆದಿತ್ಯ ನಂಜರಾಜ್ ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ ಜಾನಪದ ಪರಿಷತ್ತಿನಲ್ಲಿ ದಿನಾಂಕ 15-07-2024ರಂದು ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಡೆದ 128ನೇ ಆಡಳಿತ ಮಂಡಳಿ ಸಭೆಯಲ್ಲಿ ಇಲ್ಲಿಯವರೆಗೆ ಅಧ್ಯಕ್ಷರಾಗಿದ್ದ ಪ್ರೊ.ಹಿ ಶಿ ರಾಮಚಂದ್ರೇಗೌಡರು ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಪ್ರಸ್ತಾಪಿಸಲಾಯಿತು ಎಂದಿದ್ದಾರೆ.
ಈ ಹಿನ್ನಲೆಯಲ್ಲಿ ಪರಿಷತ್ತಿನ ಕಾರ್ಯಾಧ್ಯಕ್ಷರಾಗಿದ್ದ ಪ್ರೊ.ಹಿ.ಚಿ ಬೋರಲಿಂಗಯ್ಯ ಅವರನ್ನು ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
Good News: ಗ್ರಾಮ ಲೆಕ್ಕಿಗರು 1,000 ಹಾಗೂ 750 ಜನ ಸರ್ವೇಯರ್ ಭರ್ತಿ: ಸಚಿವ ಕೃಷ್ಣಭೈರೇಗೌಡ
HD ಕುಮಾರಸ್ವಾಮಿ ಸರ್ವಪಕ್ಷ ಸಭೆಗೆ ಬರದೇ ‘ಬಾಡೂಟಕ್ಕೆ’ ಹೋಗಿದ್ದು ದುರಂತ : ಸಚಿವ ಚೆಲುವರಾಯಸ್ವಾಮಿ