BREAKING: ಮಂಡ್ಯದ ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರಿಗೆ ನಿಷೇಧ: ತಹಶೀಲ್ದಾರ್ ಆದೇಶ

ಮಂಡ್ಯ : ಕೆ.ಆರ್.ಎಸ್ ಜಲಾಶಯದಿಂದ ಕಾವೇರಿ ನದಿಗೆ 85 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದ್ದು, ಹೀಗಾಗಿ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮುತ್ತತ್ತಿಗೆ ಬರುವ ಪ್ರವಾಸಿಗರಿಗೆ ಪ್ರವೇಶ ನಿಷೇಧಿಸಿ ಮಳವಳ್ಳಿ ತಾಲೂಕು ದಂಡಾಧಿಕಾರಿ ಎಸ್.ವಿ. ಲೋಕೇಶ್ ಆದೇಶ ಹೊರಡಿಸಿದ್ದಾರೆ. ಮುತ್ತತ್ತಿ ಗ್ರಾಮವು ಪುರಾಣ ಪ್ರಸಿದ್ಧ ಯಾತ್ರಾಸ್ಥಳ ಹಾಗೂ ಪ್ರೇಕ್ಷಣೀಯ ಸ್ಥಳವಾಗಿದ್ದು, ಹೀಗಾಗಿ ದೇವಾಲಯಕ್ಕೆ ದಿನನಿತ್ಯ ಸಾವಿರಾರು ಭಕ್ತರು ಆಗಮಿಸಿ ಕಾವೇರಿ ನದಿಯಲ್ಲಿ ಪುಣ್ಯ ಸ್ನಾನಕ್ಕೆ ಇಳಿಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಕಾವೇರಿ ನದಿ ಪಾತ್ರಗಳಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ನದಿಯಲ್ಲಿ … Continue reading BREAKING: ಮಂಡ್ಯದ ‘ಮುತ್ತತ್ತಿ ಪ್ರವಾಸಿ ತಾಣ’ಕ್ಕೆ ಪ್ರವಾಸಿಗರಿಗೆ ನಿಷೇಧ: ತಹಶೀಲ್ದಾರ್ ಆದೇಶ