ಬಳ್ಳಾರಿ : ನಗರದ 03 ಪರೀಕ್ಷಾ ಕೇಂದ್ರಗಳಲ್ಲಿ ಜು.20 ರಂದು ಮಧ್ಯಾಹ್ನ 02 ಗಂಟೆಯಿಂದ ಸಂಜೆ 04.30 ಗಂಟೆಯವರೆಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಸಂಸ್ಥೆಯಲ್ಲಿನ ನೇಮಕಾತಿಗಳಿಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯ ಆವರಣವನ್ನು ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರನ್ವಯ ನಿಬರ್ಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಜೆರಾಕ್ಸ್, ಇಂಟರ್‍ನೆಟ್ ಸೆಂಟರ್‍ಗಳು ಕಾರ್ಯನಿರ್ವಹಿಸದಂತೆ ಮುಚ್ಚಲು ಆದೇಶಿಸಿದ್ದು, ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಡಿಪ್ಲೋಮಾ ಪ್ರವೇಶ ಪರೀಕ್ಷಾ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕದ ‘ಕೊಬ್ಬರಿ ಬೆಳೆಗಾರ’ರಿಗೆ ‘ಕೇಂದ್ರ ಸರ್ಕಾರ’ದಿಂದ ಸಿಹಿಸುದ್ದಿ
BREAKING: ಬೆಂಗಳೂರಲ್ಲಿ ಠಾಣೆಯಲ್ಲಿ ‘ಪೊಲೀಸ್ ಸಿಬ್ಬಂದಿ’ಗಳ ನಡುವೆ ಗಲಾಟೆ: ‘ASI’ ಮೇಲೆ ‘HC’ ಹಲ್ಲೆಗೆ ಯತ್ನ.?