ಬಳ್ಳಾರಿ:ಜಿಲ್ಲೆಯಲ್ಲಿ ಮೇ 05 ರಂದು ಮಧ್ಯಾಹ್ನ 02 ರಿಂದ ಸಂಜೆ 05.20 ರವರೆಗೆ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸಿಆರ್‍ಪಿಸಿ ಕಲಂ 144 ರ ಅಡಿ ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ನಗರದ ಒಟ್ಟು 05 ಕೇಂದ್ರಗಳಲ್ಲಿ ನೀಟ್ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಒಳಗಿನ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿದ್ದಾರೆ.ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶವನ್ನು ನಿಷೇಧಿಸಿದೆ ಹಾಗೂ ಆ ದಿನದಂದು ಮಧ್ಯಾಹ್ನ 01 ರಿಂದ ಸಂಜೆ 05.30 ರವರೆಗೆ ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತಲಿನ ಝೆರಾಕ್ಸ್ ಅಂಗಡಿಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಆದೇಶಿಸಲಾಗಿದೆ.

ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

Share.
Exit mobile version