ಬೆಂಗಳೂರು: ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.
ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ನಾಳೆ ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.
ನಾಳೆ ಸಂಜೆ 6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂಬುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ಐದು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. 13 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. 11 ಸಿಆರ್ ಪಿಎಫ್, 14 ಕೆ ಎಸ್ ಆರ್ ಪಿ ಹಾಗೂ 40 ಸಿಎಆರ್ ತುಕಡಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನಗರ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಭದ್ರತೆ ಕೈಗೊಳ್ಳಲಾಗಿದೆ ಎಂದಿದ್ದಾರೆ.
ನೀವು ‘PF ಖಾತೆ’ಯಿಂದ ಹಣ ಹಿಂಪಡೆಯಲು ‘ತೆರಿಗೆ’ ಸಹ ಪಾವತಿಸಬೇಕು: ಯಾವಾಗ? ಏಕೆ? ಇಲ್ಲಿದೆ ಮಾಹಿತಿ
ಅಶ್ಲೀಲ ವಿಡಿಯೋ ವೈರಲ್ ಮಾಡಿದ ಗೆಳೆಯ : ನೇಣು ಬಿಗಿದುಕೊಂಡು ಅಪ್ರಾಪ್ತ ಬಾಲಕಿ ಆತ್ಮಹತ್ಯೆ!