ನಾಳೆ ಸಂಜೆಯಿಂದ ಏ.26ರ ಮಧ್ಯರಾತ್ರಿವರೆಗೆ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ: ‘ಮದ್ಯ ಮಾರಾಟ’ವೂ ಬಂದ್

ಬೆಂಗಳೂರು: ಏಪ್ರಿಲ್.26ರಂದು ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಗಾಗಿ ಮೊದಲ ಹಂತದ ಮತದಾನ ನಡೆಯಲಿದೆ. ಈ ಕಾರಣಕ್ಕಾಗಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಲ್ಲಿ ನಾಳೆ ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ. ನಾಳೆ ಸಂಜೆ 6 ಗಂಟೆಯಿಂದ ಬೆಂಗಳೂರು ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಐದು ಲೋಕಸಭಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ. … Continue reading ನಾಳೆ ಸಂಜೆಯಿಂದ ಏ.26ರ ಮಧ್ಯರಾತ್ರಿವರೆಗೆ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ: ‘ಮದ್ಯ ಮಾರಾಟ’ವೂ ಬಂದ್