ಮೈಸೂರು: ಮಹಿಷ ಮಂಡಲೋತ್ಸವ ಆಚರಣೆ ವಿಚಾರವಾಗಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಕಮೀಷನರ್ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ.
ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು, ಮಹಿಷ ಮಂಡಲೋತ್ಸವ ಆಚರಣೆಯ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟೌನ್ ಹಾಲ್ ನ ಒಳ ಆವರಣ ಹೊರತುಪಡಿಸಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದಿದ್ದಾರೆ.
ದಿನಾಂಕ 28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಯಾವುದೇ ಸಭೆ ಸಮಾರಂಭ, ರ್ಯಾಲಿ ಹಾಗೂ ಮೆರವಣಿಗೆ ನಡೆಸದಂತೆ ನಿಷೇಧವಿದೆ. ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಮೈಸೂರು ನಗರ ಕಮೀಷನರ್ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ.
‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ದಸರಾ, ದೀಪಾವಳಿ ಪ್ರಯುಕ್ತ ‘6,000 ವಿಶೇಷ ರೈಲು’ಗಳ ಸಂಚಾರ
BREAKING : ಮುಸ್ಲಿಂರು ‘ಹಮ್ ಪಾಂಚ್ ಹಮಾರಾ ಪಂಚಿಸ್’ ಅಂತಾರೆ : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ