ಶಿವಮೊಗ್ಗ: ಸ್ವಾತಂತ್ರ್ಯ ದಿನಾಚರಣೆ ಸಲುವಾಗಿ ಹಾಕಲಾಗಿದ್ದಂತ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ತೆರವುಗೊಳಿಸಿದ ಕಾರಣ, ಪೊಲೀಸರು ಕಿಡಿಗೇಡಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ. ಹೀಗೆ ಸಾವರ್ಕರ್ ಫ್ಲೆಕ್ಸ್ ತೆಗೆದಂತ ಕಿಡಿಗೇಡಿಗಳ ಕೃತ್ಯ ಖಂಡಿಸಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಧರಣಿ, ಸತ್ಯಾಗ್ರಹ ನಡೆಸುತ್ತಿರುವ ಕಾರಣ, ಶಿವಮೊಗ್ಗ ನಗರಾಧ್ಯಂತ ಮುಂಜಾಗ್ರತಾ ಕ್ರಮವಾಗಿ ಇಂದು ಹಾಗೂ ನಾಳೆ 144 ಸೆಕ್ಷನ್ ಆಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
BIG BREAKING NEWS: ಶಿವಮೊಗ್ಗದಲ್ಲಿ ಸಾವರ್ಕರ್ ಬ್ಯಾನರ್ ತೆರವು ಗೊಳಿಸಿದ್ದಕ್ಕೆ ಗಲಾಟೆ: ಪೊಲೀಸರಿಂದ ಲಾಠಿ ಚಾರ್ಜ್
ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿ ಡಿ ಸಾವರ್ಕರ್ ಫ್ಲೆಕ್ಸ್ ಅಳವಡಿಸಲಾಗಿತ್ತು. ಹೀಗೆ ಅಳವಡಿಸಲಾಗಿದ್ದಂತ ಫ್ಲೆಕ್ಸ್ ಅನ್ನು ಕೆಲ ಕಿಡಿಗೇಡಿಗಳು ದಿಢೀರ್ ನುಗ್ಗಿ ತೆರವುಗೊಳಿಸಿದ್ದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಪೊಲೀಸರು ಕಿಡಿಗೇಡಿಗಳ ಮೇಲೆ ಲಾಠಿಚಾರ್ಜ್ ಕೂಡ ನಡೆಸಿದ್ದರು.
BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ
ಇನ್ನೂ ಸಾವರ್ಕರ್ ಫ್ಲೆಕ್ಸ್ ತೆರವುಗೊಳಿಸಿದ್ದನ್ನು ಖಂಡಿಸಿ, ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು, ಸ್ಥಳದಲ್ಲಿ ಧರಣಿ, ಪ್ರತಿಭಟನೆ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಎಸ್ ಪಿ ಲಕ್ಷ್ಮೀಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲದೇ ಸ್ಥಳದಲ್ಲಿ ಬಿಗುವಿನ ವಾತಾವರಣ ಇರೋ ಕಾರಣದಿಂದಾಗಿ, ಮುಂಜಾಗ್ರತಾ ಕ್ರಮವಾಗಿ ನಗರಾಧ್ಯಂತ ಇಂದು ಮತ್ತು ನಾಳೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ.