Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಟ್ಕಳ ಕಡಲತೀರದ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದಿಂದ ವಿಶ್ವಾಸದ್ರೋಹ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

BIG UPDATE : ಉತ್ತರಕನ್ನಡದಲ್ಲಿ ಘೋರ ದುರಂತ : ಕಪ್ಪೆ ಚಿಪ್ಪಿಗಾಗಿ ನದಿಯಲ್ಲಿ ಮುಳುಗಿ, ಒಂದೇ ಕುಟುಂಬದ 8 ಜನ ಜಲಸಮಾಧಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ 2025 ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ
KARNATAKA

ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ 2025 ಫೆಬ್ರವರಿ ಅಂತ್ಯದೊಳಗೆ ಪೂರ್ಣ: ಸಚಿವ ಮಧು ಬಂಗಾರಪ್ಪ

By ವಸಂತ ಬಿ ಈಶ್ವರಗೆರೆ

ಬೆಳಗಾವಿ ಸುವರ್ಣವಿಧಾನಸೌಧ : ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಮತ್ತು ಪಟ್ಟಿ ಪ್ರಕಟಿಸಿದ ನಂತರ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.

ವಿಧಾನ ಪರಿಷತನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂಬುದು ಪ್ರೌಢಶಾಲಾ ಸಹ ಶಿಕ್ಷಕರ ಬಹುದಿನಗಳ ಬೇಡಿಕೆಯಾಗಿದೆ. ಸಂಬಂಧಿಸಿದ ಇಲಾಖೆಯು ಈ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಸಂಕನೂರ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಸಚಿವರಾದ ಮಧು ಬಂಗಾರಪ್ಪ, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮಾಹೆ ಮತ್ತು ಮಾರ್ಚ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ( ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2024ರ ಅಕ್ಟೋಬರ್ 16ರಂದು ನೀಡಿರುವ ಅಭಿಪ್ರಾಯದನ್ವಯ ಶಾಲಾ ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ, ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕರ್ನಾಟಕ ಸರ್ಕಾರಿ ನೌಕರರ (ಜೇಷ್ಠತಾ) ನಿಯಮಗಳು 1957ರ ನಿಯಮ 7-ಎ ರ ನಿಯಮದನ್ವಯ ಪರಿಶೀಲಿಸಿ ಅಗತ್ಯ ಕ್ರಮವಹಿಸಲು 2024ರ ಅಕ್ಟೋಬರ್ ಮಾಹೆಯಲ್ಲಿ ಬರೆದ ಪತ್ರದಲ್ಲಿ ಬೆಂಗಳೂರಿನ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ, ಧಾರವಾಡ ಮತ್ತು ಕಲಬುರಗಿಯ ಅಪರ ಆಯುಕ್ತರಿಗೆ ಹಾಗೂ ಪದವಿ ಪೂರ್ವ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಿಗೆ ನಿರ್ದೇಶನ ನೀಡಲಾಗಿದ್ದು, ಇದರನ್ವಯ ಪದೋನ್ನತಿ ಪ್ರಕ್ರಿಯೆಯನ್ನು ತ್ವರಿತವಾಗಿ ನಿಯಮಾನುಸಾರ ನಡೆಸಲು ಕ್ರಮ ವಹಿಸಲಾಗುವುದು ಎಂದು ಪ್ರತಿಕ್ರಿಯಿಸಿದರು.

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

BREAKING: ಲೋಕಸಭೆ, ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ | Lok Sabha, Rajya Sabha adjourned

Share. Facebook Twitter LinkedIn WhatsApp Email

Related Posts

BREAKING: ಭಟ್ಕಳ ಕಡಲತೀರದ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

1 Min Read

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದಿಂದ ವಿಶ್ವಾಸದ್ರೋಹ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

BIG UPDATE : ಉತ್ತರಕನ್ನಡದಲ್ಲಿ ಘೋರ ದುರಂತ : ಕಪ್ಪೆ ಚಿಪ್ಪಿಗಾಗಿ ನದಿಯಲ್ಲಿ ಮುಳುಗಿ, ಒಂದೇ ಕುಟುಂಬದ 8 ಜನ ಜಲಸಮಾಧಿ!

1 Min Read
Recent News

BREAKING: ಭಟ್ಕಳ ಕಡಲತೀರದ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದಿಂದ ವಿಶ್ವಾಸದ್ರೋಹ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

BIG UPDATE : ಉತ್ತರಕನ್ನಡದಲ್ಲಿ ಘೋರ ದುರಂತ : ಕಪ್ಪೆ ಚಿಪ್ಪಿಗಾಗಿ ನದಿಯಲ್ಲಿ ಮುಳುಗಿ, ಒಂದೇ ಕುಟುಂಬದ 8 ಜನ ಜಲಸಮಾಧಿ!

BREAKING : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ : ನೊಣವಿನಕೆರೆ ಕಾಡಸಿದ್ದೇಶ್ವರ ಸ್ವಾಮೀಜಿ ಭವಿಷ್ಯ!

State News
KARNATAKA

BREAKING: ಭಟ್ಕಳ ಕಡಲತೀರದ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಸಂಭವಿಸಿದ ಭೀಕರ ಜಲದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರದಿಂದ ವಿಶ್ವಾಸದ್ರೋಹ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

BIG UPDATE : ಉತ್ತರಕನ್ನಡದಲ್ಲಿ ಘೋರ ದುರಂತ : ಕಪ್ಪೆ ಚಿಪ್ಪಿಗಾಗಿ ನದಿಯಲ್ಲಿ ಮುಳುಗಿ, ಒಂದೇ ಕುಟುಂಬದ 8 ಜನ ಜಲಸಮಾಧಿ!

BREAKING : ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ : ನೊಣವಿನಕೆರೆ ಕಾಡಸಿದ್ದೇಶ್ವರ ಸ್ವಾಮೀಜಿ ಭವಿಷ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.