ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರ ಮುಂಬಡ್ತಿ ಕುರಿತಂತೆ ರಾಜ್ಯ ಸರ್ಕಾರ ಚರ್ಚೆಗೆ ಇಂದು ಸಭೆ ಆಯೋಜಿಸಿದೆ.
ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ವಿವಿಧ ಇಲಾಖೆಗಳ ಉನ್ನ ತಾಧಿಕಾರಿಗಳ ಸಭೆ ಕರೆಯಲಾಗಿದೆ. ಸೋಮವಾರ ಸೂಚನಾ ಪತ್ರ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಎಸ್ಸಿ/ಎಸ್ಟಿ ನೌಕರರಿಗೆ ಜೇಷ್ಠತೆ ಸಂರಕ್ಷಣಾ ಕಾಯಿದೆ ಜಾರಿಯಲ್ಲಿದ್ದರೂ ಮುಂಬಡ್ತಿಯಲ್ಲಿ ಮೀಸಲಾತಿ ನೀಡದೆ ವಂಚನೆ ಮಾಡಿರುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ರಾಜ್ಯಾಧ್ಯಕ್ಷರು ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಕಾರ್ಯದರ್ಶಿ ಅಧ್ಯಕ್ಷ ತೆಯಲ್ಲಿ ಇಂದು ಮಧ್ಯಾಹ್ನ 3.30ಕ್ಕೆ ಸಭೆ ಏರ್ಪಡಿಸಲಾಗಿದೆ.