Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ‘ಅಂಬೇಡ್ಕರ್ ಭಾವಚಿತ್ರ’ ಕಡ್ಡಾಯ: ‘KMF’ ಮಹತ್ವದ ಆದೇಶ

08/04/2026 9:08 PM

ನಗುತ್ತಿದ್ದ ಮಗುವಿನ ಗಂಟಲಿನಲ್ಲಿ ಸಿಲುಕಿದ ಬದುಕಿದ್ದ ಮೀನು! ಇಂದೋರ್ ವೈದ್ಯರ ಚಾಕಚಕ್ಯತೆಯಿಂದ ಬಚಾವಾದ ಬಾಲಕ

08/04/2026 8:47 PM

ಆಧಾರ್ ಅಪ್‌ಡೇಟ್ ಮಾಡೋ ಮುನ್ನ ಇದನ್ನ ಓದಿ: ಜನ್ಮ ದಿನಾಂಕ ಬದಲಾವಣೆಗೆ ಸಿಗಲ್ಲ ಎರಡನೇ ಚಾನ್ಸ್!

08/04/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳೆ ವಿಮೆ ನೀತಿ ಬದಲಾವಣೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಈಶ್ವರ ಖಂಡ್ರೆ
KARNATAKA

ಬೆಳೆ ವಿಮೆ ನೀತಿ ಬದಲಾವಣೆ ಮಾಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಈಶ್ವರ ಖಂಡ್ರೆ

By kannadanewsnow0912/12/2025 3:09 PM

ಬೆಳಗಾವಿ ಸುವರ್ಣಸೌಧ : ಕೇಂದ್ರ ಸರ್ಕಾರ 2016-17ರಲ್ಲಿ ಜಾರಿಗೆ ತಂದ ಬೆಳೆ ವಿಮೆ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭ ಆಗುತ್ತಿದೆ. 2016ರಿಂದ 2024ರವರೆಗೆ ಖಾಸಗಿ ಕಂಪನಿಗಳು ಸಾವಿರಾರು ಕೋಟಿ ರೂಪಾಯಿ ಲಾಭ ಮಾಡಿವೆ. ಇದರಿಂದ ರೈತರಿಗೆ ಅನುಕೂಲ ಆಗುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮೇಲ್ಮನೆಗಿಂದು ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ಉತ್ತರ ಕರ್ನಾಟಕದ ಚರ್ಚೆಯ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಅವರು, ಮಳೆ, ಪ್ರವಾಹದಿಂದ ಬೆಳೆ ಹಾನಿ ಆದಾಗ 3 ದಿನಗಳ ಒಳಗಾಗಿ ವೆಬ್ ಲಿಂಕ್ ಅಥವಾ ದೂರವಾಣಿ ಮುಖಾಂತರ ಮಾಹಿತಿ ನೀಡಬೇಕು ಎಂಬ ಷರತ್ತಿದೆ. ಆದರೆ ಖಾಸಗಿ ಕಂಪನಿಗಳ ಫೋನ್ ಮತ್ತು ವೆಬ್ ಲಿಂಕ್ ಕಾರ್ಯ ನಿರ್ವಹಿಸುವುದಿಲ್ಲ. ಬೆಳೆ ಹಾನಿಯಾದವರು ಮಾಹಿತಿ ನೀಡಿಲ್ಲ ಎಂದು ಪರಿಹಾರ ನೀಡುವುದಿಲ್ಲ. ಇಂತಹ ಸಾಕಷ್ಟು ನ್ಯೂನತೆಗಳಿವೆ ಎಂದರು.

ಬೆಳೆ ಕಟಾವು ಪ್ರಯೋಗದಲ್ಲಿ 7 ವರ್ಷದ ಅಂದಾಜಿನಲ್ಲಿ 5 ವರ್ಷದ ಇಳುವರಿಯ ಸರಾಸರಿ ತೆಗೆದುಕೊಳ್ಳುವ ವಿಚಾರದಲ್ಲೂ ವೈಜ್ಞಾನಿಕವಾಗಿ ನಿಗದಿ ಮಾಡುವುದಿಲ್ಲ ಮತ್ತು ಋತುಮಾನದ ಮಧ್ಯಕಾಲೀನ ವೈಪರೀತ್ಯ (ಮಿಡ್ ಸೀಸನ್ ಅಡ್ವರ್ಸಿಟಿ) ವಿಚಾರದಲ್ಲೂ ರೈತರಿಗೆ ಅನ್ಯಾಯ ಆಗುತ್ತಿದೆ. ಇಂತಹ ನ್ಯೂನತೆಗಳು ಇವೆ. ಒಟ್ಟಾರೆ ಬೆಳೆ ವಿಮೆ ನೀತಿ ಬದಲಾವಣೆ ಆದರೆ ಮಾತ್ರ ರೈತರಿಗೆ ಒಳ್ಳೆಯದಾಗುತ್ತದೆ. ಇದಕ್ಕೆ ಎಲ್ಲರೂ ಕೂಡಿ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಬೆಳೆ ವಿಮೆ ಯೋಜನೆಗೆ ಮಾಡಿರುವ ಮಾರ್ಗಸೂಚಿಗಳಲ್ಲಿ ಸಾಕಷ್ಟು ನ್ಯೂನತೆ ಇದೆ. ಇದನ್ನು ಪರಿಹರಿಸಲು ಕೃಷಿ ಸಚಿವರು ಸಭೆ ಮಾಡಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರ, ಆದರೆ ಈವರೆಗೆ ಕೇಂದ್ರ ಸರ್ಕಾರ ಮಾರ್ಗಸೂಚಿಗೆ ಬದಲಾವಣೆ ಮಾಡಿಲ್ಲ ಎಂದರು.

ಕೇಂದ್ರ ಸರ್ಕಾರ 5-10 ಖಾಸಗಿ ವಿಮಾ ಕಂಪನಿಗಳನ್ನು ಪಟ್ಟಿಯಲ್ಲಿ ಸೇರ್ಪಡೆ ಮಾಡಿದ್ದು ಅವರೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಾರೆ. ಅವರು ರಾಜ್ಯದ 31 ಜಿಲ್ಲೆಗಳನ್ನು ಹಂಚಿಕೊಂಡು ತಮಗೆ ಲಾಭವಾಗುವ ರೀತಿಯಲ್ಲಿ ಟೆಂಡರು ಹಾಕಿ ಲಾಭ ಮಾಡಿಕೊಳ್ಳುತ್ತಿದ್ದಾರೆ.

2016ಕ್ಕೆ ಮುನ್ನ ಭಾರತೀಯ ಕೃಷಿ ನಿಗಮದ ವತಿಯಿಂದ ವಿಮೆ ಜಾರಿ ಮಾಡುತ್ತಿದ್ದರು, ಆಗ ನಿಗಮಕ್ಕೆ ನಷ್ಟ ಆಗುತ್ತಿತ್ತು. ಆ ನಷ್ಟವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಭರಿಸುತ್ತಿತ್ತು. ಈಗಲೂ ನಿಗಮಕ್ಕೆ ನಷ್ಟ ಆಗುತ್ತದೆ ಆದರೆ ಖಾಸಗಿ ಕಂಪನಿಗಳಿಗೆ ಮಾತ್ರ ಲಾಭ ಆಗುತ್ತಿದೆ. ಹೀಗಾಗಿ ಇಡೀ ನೀತಿಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು.

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ.!

ಮಂಡ್ಯದಲ್ಲಿ 12 ಖಾಸಗಿ ಆಸ್ಪತ್ರೆಗಳನ್ನು ಆರೋಗ್ಯ ಸಂಜೀವಿನಿ ಯೋಜನೆ ವ್ಯಾಪ್ತಿಗೆ ತರಲು ಕ್ರಮ: ಡಿಸಿ ಡಾ.ಕುಮಾರ

Share. Facebook Twitter LinkedIn WhatsApp Email

Related Posts

ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ‘ಅಂಬೇಡ್ಕರ್ ಭಾವಚಿತ್ರ’ ಕಡ್ಡಾಯ: ‘KMF’ ಮಹತ್ವದ ಆದೇಶ

08/04/2026 9:08 PM1 Min Read

ಸಾಗರದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು: ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲು

08/04/2026 8:33 PM1 Min Read

ಚಂದ್ರದ್ರೋಣ ಪರ್ವತದಲ್ಲಿ ಚಾರಣಕ್ಕೆ ಹೋಗಿದ್ದ ಬಾಲಕಿ ನಾಪತ್ತೆ: ಶೋಧಕ್ಕೆ ಅರಣ್ಯ ಇಲಾಖೆ ಬೆಂಬಲಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

08/04/2026 8:29 PM1 Min Read
Recent News

ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ‘ಅಂಬೇಡ್ಕರ್ ಭಾವಚಿತ್ರ’ ಕಡ್ಡಾಯ: ‘KMF’ ಮಹತ್ವದ ಆದೇಶ

08/04/2026 9:08 PM

ನಗುತ್ತಿದ್ದ ಮಗುವಿನ ಗಂಟಲಿನಲ್ಲಿ ಸಿಲುಕಿದ ಬದುಕಿದ್ದ ಮೀನು! ಇಂದೋರ್ ವೈದ್ಯರ ಚಾಕಚಕ್ಯತೆಯಿಂದ ಬಚಾವಾದ ಬಾಲಕ

08/04/2026 8:47 PM

ಆಧಾರ್ ಅಪ್‌ಡೇಟ್ ಮಾಡೋ ಮುನ್ನ ಇದನ್ನ ಓದಿ: ಜನ್ಮ ದಿನಾಂಕ ಬದಲಾವಣೆಗೆ ಸಿಗಲ್ಲ ಎರಡನೇ ಚಾನ್ಸ್!

08/04/2026 8:41 PM

ಸಾಗರದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು: ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲು

08/04/2026 8:33 PM
State News
KARNATAKA

ಪ್ರತಿ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ‘ಅಂಬೇಡ್ಕರ್ ಭಾವಚಿತ್ರ’ ಕಡ್ಡಾಯ: ‘KMF’ ಮಹತ್ವದ ಆದೇಶ

By kannadanewsnow0908/04/2026 9:08 PM KARNATAKA 1 Min Read

ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ (ಬಮೂಲ್) ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಸಂವಿಧಾನ ಶಿಲ್ಪಿ ಡಾ.…

ಸಾಗರದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು: ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲು

08/04/2026 8:33 PM

ಚಂದ್ರದ್ರೋಣ ಪರ್ವತದಲ್ಲಿ ಚಾರಣಕ್ಕೆ ಹೋಗಿದ್ದ ಬಾಲಕಿ ನಾಪತ್ತೆ: ಶೋಧಕ್ಕೆ ಅರಣ್ಯ ಇಲಾಖೆ ಬೆಂಬಲಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

08/04/2026 8:29 PM

ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಅಧಿಕಾರಿಗಳೇ ಜವಾಬ್ದಾರರು: ಜಿಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಖಡಕ್ ಎಚ್ಚರಿಕೆ

08/04/2026 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.