ಬೆಂಗಳೂರು: ಬೆಂಗಳೂರು ಮನೆ ಮಾಲೀಕರೆ ಎಚ್ಚರವಾಗಿರಬೇಕು. ಬಾಡಿಗೆ ಮನೆ ಪಡೆದು ವೇಶ್ಯಾವಾಟಿ ದಂಧೆ ನಡೆಸುತ್ತಿರುವ ಆರೋಪ ಹಿನ್ನೆಲೆಯಲ್ಲಿ ಎಂಟು ವಿದೇಶಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
BIGG NEWS: ಉಡುಪಿಯಲ್ಲಿ ಕೊನೆಗೂ ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರುಬಿಟ್ಟ ಗ್ರಾಮಸ್ಥರು
ಕೆಂಗೇರಿ ಹಾಗೂ ಸೋಲದೇವನಹಳ್ಳಿಯ ಎರಡು ಕಡೆ ಪ್ರತ್ಯೇಕ ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರು ಹಾಗೂ ಆರು ಜನ ಪುರುಷರನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಪ್ರಾಥಮಿಕವಾಗಿ ವಿಚಾರಣೆ ವೇಳೆ ತಾವು ಭಾರತ ನಿವಾಸಿಗಳು ಎಂದಿದ್ದಾರೆ.ಪಶ್ಚಿಮ ಬಂಗಾಳ ಮತ್ತು ತ್ರಿಪುರದ ಆಧಾರ್ ಕಾರ್ಡ್ಸ್, ಬಾಂಗ್ಲಾದೇಶದ ಕೋವಿಡ್ ವ್ಯಾಕ್ಸಿನೇಷನ್ ಸರ್ಟಿಫಿಕೇಟ್ ಮತ್ತು ಕೆಲ ದಾಖಲೆಗಳು ದೊರೆತಿವೆ. ಆರೋಪಿಗಳು ಅಕ್ರಮ ವಲಸೆ ಬಂದವರು ಎಂಬ ಅನುಮಾನವಿದ್ದು, ತನಿಖೆ ಮಾಡಲಾಗ್ತಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಡಾ.ಎಸ್.ಡಿ. ಶರಣಪ್ಪ ತಿಳಿಸಿದ್ದಾರೆ.