ಬೆಂಗಳೂರು : ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ, ಇಂದು ಭಾರತ್ ಬಂದ್ ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ತಳ್ಳಾಟ ಹಾಗೂ ವಾಗ್ವಾದ ನಡೆಯಿತು.
ಹೌದು ಇಂದು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಟೌನ್ ಹಾಲ್ ಬಳಿ ವಿವಿಧ ಕಾರ್ಮಿಕ ಸಂಘಟನೆಗಳು ಧರಣಿ ನಡೆಸಿದರು. ಧರಣಿ ಮಾಡಲು ಎರಡು ಲಾರಿಗಳಲ್ಲಿ ಕಾರ್ಮಿಕರು ಬಂದಿದ್ದರು. ಈ ವೇಳೆ ಪೊಲೀಸರು ಧರಣಿಗೆ ಮುಂದಾದ ಕಾರ್ಮಿಕರನ್ನು ತಡೆದರು. ಇಲ್ಲಿ ಧರಣಿಗೆ ಅವಕಾಶ ಇಲ್ಲ ಎಂದು ಪೊಲೀಸರು ತಿಳಿಸಿದರು.
ಆಗ ಪೊಲೀಸರು ವಿರುದ್ಧ ಪ್ರತಿಭಟನಾ ನಿರತ ಕಾರ್ಮಿಕರು ಆಕ್ರೋಶ ಹೊರ ಹಾಕಿದರು. ಕಾರ್ಮಿಕರು ಮತ್ತು ಪೊಲೀಸರ ನಡುವೆ ವಾಗ್ವಾದ ನೂಕಾಟ ತಳಾಟ ನಡೆಯಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಪೊಲೀಸರು ನಾಲ್ಕು ಬಿಎಂಟಿಸಿ ಬಸ್ಗಳಲ್ಲಿ ಕಾರ್ಮಿಕರನ್ನು ವಶಕ್ಕೆ ಪಡೆದು ಕರೆದೊಯ್ದರು.








