ರಾಮನಗರ: ಜಿಲ್ಲೆಯ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಿಲ್ಲ ಎಂದು ವಿದ್ಯಾರ್ಥಿಗಳು ಕಾಲೇಜು ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ಸುಮಾರು 300 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಪಾಠ ಮಾಡಲು ಉಪನ್ಯಾಸಕರಿಲ್ಲದೆ ಗೋಳಾಡುವಂತಾಗಿದೆ. ಇನ್ನು ವರ್ಗಾವಣೆ ಆಗಿರುವ ಉಪನ್ಯಾಸಕರ ಜಾಗಕ್ಕೆ ಇವರೆಗೂ ಯಾರನ್ನು ನೇಮಕ ಮಾಡಿಲ್ಲ, ಇದರಿಂದ ಬೇಸತ್ತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
BIGG NEWS: ಸಿದ್ದೇಶ್ವರ ಶ್ರೀಗಳು ಅಸ್ತಂಗತ:ನಿಡಗುಂದಿ ಪಟ್ಟಣ ಬಂದ್; ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ
ಕಳೆದ ಐದಾರು ತಿಂಗಳಿಂದ ಪಾಠ ಮಾಡಲು ಉಪನ್ಯಾಸಕರಿಲ್ಲ, ಈ ಕುರಿತು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಶೈಕ್ಷಣಿಕ ವರ್ಷಕ್ಕೆ ತೊಂದರೆಯಾಗುತ್ತಿದೆ. ನಮ್ಮ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಎಂದು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ.
BIGG NEWS: ಸಿದ್ದೇಶ್ವರ ಶ್ರೀಗಳು ಅಸ್ತಂಗತ:ನಿಡಗುಂದಿ ಪಟ್ಟಣ ಬಂದ್; ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ