Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೌತಪಾ: ಬೇಸಿಗೆಯ ಅತ್ಯಂತ ಕಡು ಬೇಡಿಗೆಯ 9 ದಿನಗಳು! ಏನಿದರ ಹಿನ್ನೆಲೆ? ಭಾರತ ಯಾಕೆ ಬೆಚ್ಚಿಬೀಳುತ್ತೆ?

‘NEET’ ಅಕ್ರಮ ಖಂಡಿಸಿ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ನಿಂದ ಪ್ರತಿಭಟನೆ : ಈ ರಸ್ತೆಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ!

BIG NEWS, : ರಾಜ್ಯದಲ್ಲಿ ಜೂನ್ 1ರಿಂದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಶುರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘NEET’ ಅಕ್ರಮ ಖಂಡಿಸಿ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ನಿಂದ ಪ್ರತಿಭಟನೆ : ಈ ರಸ್ತೆಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ!
KARNATAKA

‘NEET’ ಅಕ್ರಮ ಖಂಡಿಸಿ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ನಿಂದ ಪ್ರತಿಭಟನೆ : ಈ ರಸ್ತೆಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ!

By ಸುರೇಶ್‌

ಬೆಂಗಳೂರು: ನೀಟ್ (NEET) ಪರೀಕ್ಷೆ ಅಕ್ರಮವನ್ನು ಖಂಡಿಸಿ ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ವತಿಯಿಂದ ನಾಳೆ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 11 ಗಂಟೆಗೆ ನಗರದ ಪ್ರಸಿದ್ಧ ಫ್ರೀಡಂ ಪಾರ್ಕ್‌ನಲ್ಲಿ ಈ ಬೃಹತ್ ಧರಣಿ ಸತ್ಯಾಗ್ರಹ ನಡೆಯಲಿದ್ದು, ರಾಜ್ಯದ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಸೇರಿದಂತೆ ಹಲವು ಗಣ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಜಂಟಿಯಾಗಿ ಆಕ್ರೋಶ ಹೊರಹಾಕಲಿದ್ದಾರೆ.

ಸಂಚಾರ ಮಾರ್ಗದಲ್ಲಿ ಮಹತ್ವದ ಬದಲಾವಣೆ: ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಂಖ್ಯೆಯ ಕಾರ್ಯಕರ್ತರು ಮತ್ತು ಸಾರ್ವಜನಿಕರು ಸೇರುವ ನಿರೀಕ್ಷೆ ಇರುವುದರಿಂದ, ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಬೆಂಗಳೂರು ಸಂಚಾರಿ ಪೊಲೀಸರು ಸುತ್ತಮುತ್ತಲಿನ ರಸ್ತೆಗಳಲ್ಲಿ ಕೆಲ ಮಹತ್ವದ ಬದಲಾವಣೆಗಳನ್ನು ಮಾಡಿದ್ದಾರೆ. ಗುರುವಾರ ಬೆಳಿಗ್ಗೆ 07:30 ರಿಂದ ಸಂಜೆ 04:00 ಗಂಟೆಯವರೆಗೆ ಈ ಹೊಸ ಟ್ರಾಫಿಕ್ ನಿಯಮಗಳು ಜಾರಿಯಲ್ಲಿರಲಿವೆ ಎಂದು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವ ರಸ್ತೆ ಬಳಸಬೇಕು? ಹೊಸ ಸಂಚಾರ ಮಾರ್ಗಸೂಚಿಯ ಪ್ರಕಾರ, ಕೆ.ಜಿ. ರಸ್ತೆ ಮೂಲಕ ಮೈಸೂರು ಬ್ಯಾಂಕ್ ವೃತ್ತದಿಂದ ಬಲ ತಿರುವು ಪಡೆದು ಫ್ರೀಡಂ ಪಾರ್ಕ್ ಕಡೆಗೆ ಬರುವ ವಾಹನಗಳು, ಕಡ್ಡಾಯವಾಗಿ ಪ್ಯಾಲೇಸ್ ಕ್ರಾಸ್ ರಸ್ತೆಯ ಮಹಾರಾಣಿ ಅಂಡರ್ ಪಾಸ್ ರಸ್ತೆಯನ್ನು ಬಳಸಬೇಕಾಗುತ್ತದೆ. ಇನ್ನು ಪ್ರತಿಭಟನೆಯಲ್ಲಿ ಭಾಗವಹಿಸುವ ಜನರು ರೈಲ್ವೆ ನಿಲ್ದಾಣದಿಂದ ಫ್ಲೈಓವರ್‌ ರಸ್ತೆಯಲ್ಲಿ ಕಾಲ್ನಡಿಗೆಯಲ್ಲಿ ಬರುವುದರಿಂದ, ಖೋಡೆ ಜಂಕ್ಷನ್ ಕಡೆಯಿಂದ ಕೆ.ಆರ್. ಸರ್ಕಲ್ ಕಡೆಗೆ ಹೋಗುವ ವಾಹನ ಸವಾರರು ದಟ್ಟಣೆಯನ್ನು ತಪ್ಪಿಸಲು ಹಳೆ ಜೆ.ಡಿ.ಎಸ್. ಕಛೇರಿ ರಸ್ತೆಯನ್ನು ಬಳಸುವಂತೆ ವಿನಂತಿಸಲಾಗಿದೆ.

ದ್ವಿಮುಖ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧ: ಪ್ರತಿಭಟನೆಯ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ಜಂಕ್ಷನ್‌ನಿಂದ ಕನಕದಾಸ ವೃತ್ತದ ಕಡೆಗೆ ಬರುವ ಮತ್ತು ಹೋಗುವ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಇನ್ನು ಸದ್ಯ ಏಕಮುಖ (One-way) ಸಂಚಾರ ರಸ್ತೆಯಾಗಿರುವ ಸುಬ್ಬಣ್ಣ ಜಂಕ್ಷನ್‌ನಿಂದ ಎಂ.ಟಿ.ಆರ್. ಜಂಕ್ಷನ್ ಕಡೆಗೆ ಬರುವ ರಸ್ತೆಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ತಾತ್ಕಾಲಿಕವಾಗಿ ದ್ವಿಮುಖ (Two-way) ಸಂಚಾರ ರಸ್ತೆಯನ್ನಾಗಿ ಪರಿವರ್ತಿಸಲಾಗಿದೆ. ಗಾಂಧಿನಗರ ಕಡೆಗೆ ಹೋಗುವ ಸವಾರರು ಈ ರಸ್ತೆಯನ್ನು ಬಳಸಬಹುದು.

ನಗರದ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್ ಬ್ಯಾನ್: ಪ್ರತಿಭಟನಾ ಸ್ಥಳದ ಸುತ್ತಮುತ್ತ ವಾಹನ ದಟ್ಟಣೆ ನಿಯಂತ್ರಿಸುವ ಸಲುವಾಗಿ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಖೋಡೆ ಜಂಕ್ಷನ್‌ನಿಂದ ಮಹಾರಾಣಿ ಜಂಕ್ಷನ್​ವರೆಗೆ, ವೈ. ರಾಮಚಂದ್ರ ರಸ್ತೆ, ಕಾಳಿದಾಸ ರಸ್ತೆ, ಪ್ಯಾಲೇಸ್ ರಸ್ತೆ ಹಾಗೂ ಕೆ.ಜಿ. ರಸ್ತೆಗಳಲ್ಲಿ ಯಾವುದೇ ರೀತಿಯ ವಾಹನ ಪಾರ್ಕಿಂಗ್ ಮಾಡಲು ಅವಕಾಶವಿರುವುದಿಲ್ಲ ಎಂದು ಸಂಚಾರಿ ಪೊಲೀಸರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS, : ರಾಜ್ಯದಲ್ಲಿ ಜೂನ್ 1ರಿಂದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಶುರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

2 Mins Read

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

1 Min Read

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

2 Mins Read
Recent News

ನೌತಪಾ: ಬೇಸಿಗೆಯ ಅತ್ಯಂತ ಕಡು ಬೇಡಿಗೆಯ 9 ದಿನಗಳು! ಏನಿದರ ಹಿನ್ನೆಲೆ? ಭಾರತ ಯಾಕೆ ಬೆಚ್ಚಿಬೀಳುತ್ತೆ?

‘NEET’ ಅಕ್ರಮ ಖಂಡಿಸಿ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ನಿಂದ ಪ್ರತಿಭಟನೆ : ಈ ರಸ್ತೆಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ!

BIG NEWS, : ರಾಜ್ಯದಲ್ಲಿ ಜೂನ್ 1ರಿಂದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಶುರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

State News
KARNATAKA

‘NEET’ ಅಕ್ರಮ ಖಂಡಿಸಿ ಬೆಂಗಳೂರಲ್ಲಿ ಇಂದು ಕಾಂಗ್ರೆಸ್ ನಿಂದ ಪ್ರತಿಭಟನೆ : ಈ ರಸ್ತೆಗಳ ಸಂಚಾರ ಮಾರ್ಗಗಳಲ್ಲಿ ಬದಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ನೀಟ್ (NEET) ಪರೀಕ್ಷೆ ಅಕ್ರಮವನ್ನು ಖಂಡಿಸಿ ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ವತಿಯಿಂದ ನಾಳೆ ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆಯನ್ನು…

BIG NEWS, : ರಾಜ್ಯದಲ್ಲಿ ಜೂನ್ 1ರಿಂದ ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಶುರು: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

ಮೈಸೂರಲ್ಲಿ ಕಾರು-ಆಟೋ ಮಧ್ಯ ಭೀಕರ ಅಪಘಾತ : 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ!

ಒಂದೇ ಒಂದು ಅಶ್ವತ್ಥಮರವನ್ನು ನೆಟ್ಟರೆ ಸಿಗುವ ಪುಣ್ಯ ಎಷ್ಟು ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.