ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ: ದಸಂಸ ಪದಾಧಿಕಾರಿಗಳಿಂದ ಪ್ರತಿಭಟನೆ

ಮಂಡ್ಯ : ಕಂದಾಯ ಇಲಾಖೆಯಿಂದ ನೀಡುವ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ ಲಗತ್ತಿಸಬೇಕೆಂಬ ರಾಜ್ಯ ಸರ್ಕಾರದ ಆದೇಶವನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಮದ್ದೂರು ತಾಲೂಕು ಕಛೇರಿಗೆ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು. ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ನೇತೃತ್ವದಲ್ಲಿ ತಾಲೂಕು ಕಛೇರಿಗೆ ಆಗಮಿಸಿದ ಪದಾಧಿಕಾರಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ, ಸೋಮನಹಳ್ಳಿ … Continue reading ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆಯಲು ನ್ಯಾಯಾಲಯದ ಪ್ರಮಾಣ ಪತ್ರ: ದಸಂಸ ಪದಾಧಿಕಾರಿಗಳಿಂದ ಪ್ರತಿಭಟನೆ