Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

BREAKING : `ECI’ ನಿರ್ಧಾರವು ಚುನಾವಣಾ ಪ್ರಕ್ರಿಯೆಗೆ ಮಾತ್ರ ಸೀಮಿತ, ಪೌರತ್ವದ ಅಂತಿಮ ತೀರ್ಪಲ್ಲ : ಸುಪ್ರೀಂ ಕೋರ್ಟ್

BREAKING : ಮತದಾರರ ಪಟ್ಟಿ ‘SIR’ ಗೆ ಗ್ರೀನ್ ಸಿಗ್ನಲ್ : ಚುನಾವಣಾ ಆಯೋಗದ ಅಧಿಕಾರ ಎತ್ತಿಹಿಡಿದ ಸುಪ್ರೀಂಕೋರ್ಟ್ | Supreme Court

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ: ಕೈಗಾರಿಕೋದ್ಯಮಿಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ
KARNATAKA

ಸ್ಥಳೀಯರಿಗೆ ಹೆಚ್ಚು ಉದ್ಯೋಗ ಕಲ್ಪಿಸಿ: ಕೈಗಾರಿಕೋದ್ಯಮಿಗಳಲ್ಲಿ ಮದ್ದೂರು ಶಾಸಕ ಕೆ.ಎಂ.ಉದಯ್ ಮನವಿ

By ವಸಂತ ಬಿ ಈಶ್ವರಗೆರೆ

ಮಂಡ್ಯ : ಕೈಗಾರಿಕೋದ್ಯಮಿಗಳು ನೆರೆ ರಾಜ್ಯಗಳ ಕಾರ್ಮಿಕರನ್ನು ನೇಮಿಸಿಕೊಳ್ಳದೆ ಸ್ಥಳೀಯರಿಗೆ ಉದ್ಯೋಗಗಳನ್ನು ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಬೇಕೆಂದು ಶಾಸಕ ಕೆ.ಎಂ.ಉದಯ್ ಕೈಗಾರಿಕೋದ್ಯಮಿಗಳಲ್ಲಿ ಮನವಿ ಮಾಡಿದರು.

ಮದ್ದೂರು ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಸಿ.ಸಿ ಚರಂಡಿ ಮತ್ತು ರಸ್ತೆಗಳನ್ನು ಮೇಲ್ದರ್ಜೆಗೆರಿಸುವ ಅಭಿವೃದ್ಧಿ ಕಾಮಗಾರಿಗೆ ಅಂದಾಜು 8.50 ಕೋಟಿ ರೂ ವೆಚ್ಚದಲ್ಲಿ ಚಾಲನೆ ನೀಡಿ ಮಾತನಾಡಿದರು.

ಕೆಲವು ಕೈಗಾರಿಕೋದ್ಯಮಿಗಳು ರಾಜ್ಯ ಮತ್ತು ದೇಶದ ವಿವಿಧೆಡೆಯಿಂದ ಬಂದು ಸೋಮನಹಳ್ಳಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸುವ ಮೂಲಕ ಆರ್ಥಿಕಾಭಿವೃದ್ಧಿಗೆ ಸಹಕಾರಿಯಾಗಿವೆ. ಆದರೆ, ಇತ್ತಿಚೆಗೆ ಕೆಲವು ಕೈಗಾರಿಕೆಗಳಲ್ಲಿ ನೆರೆ ರಾಜ್ಯಗಳ ಕಾರ್ಮಿಕರನ್ನು ನೇಮಿಸಿಕೊಳ್ಳುವ ಮೂಲಕ ಸ್ಥಳೀಯರನ್ನು ಕಡೆಗಣನೆ ಮಾಡುತ್ತಿರುವ ಪರಿಣಾಮ ಬೆಂಗಳೂರು – ಮೈಸೂರು ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಆದರೆ, ಅಲ್ಲಿ ನೀಡುವ ವೇತನದಿಂದ ಜೀವನ ನಿರ್ವಹಣೆ ಕಷ್ಟಕರವಾಗುತ್ತಿದ್ದು, ಹೀಗಾಗಿ ಸ್ಥಳೀಯರಿಗೆ ಇಲ್ಲಿಯೇ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಮೂಲಕ ನಿರುದ್ಯೋಗ ಸಮಸ್ಯೆಗೆ ತಾವು ಸಹ ಕೈಜೋಡಿಸಬೇಕೆಂದು ಉದ್ಯಮಿಗಳಲ್ಲಿ ಮನವಿ ಮಾಡಿದರು.

ಸ್ಥಳೀಯವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಕೈಗಾರಿಕೆಗಳು ಪ್ರಾರಂಭವಾಗಬೇಕಾದರೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದರೇ ಮಾತ್ರ ಸಾಧ್ಯವಾಗುತ್ತದೆ. ಹೀಗಾಗಿ ಹಲವು ವರ್ಷಗಳಿಂದ ಈ ಕೈಗಾರಿಕಾ ಪ್ರದೇಶ ಅಭಿವೃದ್ಧಿಯಿಂದ ವಂಚಿತವಾಗಿ ಅವ್ಯವಸ್ಥೆಗಳಿಂದ ಕೂಡಿದೆ. ಅವುಗಳನ್ನು ಸರಿಪಡಿಸುವ ನಿಟ್ಟಿನಲ್ಲಿ 8.50 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದರು.

ಈಗಾಗಲೇ ಸೋಮನಹಳ್ಳಿ ಕೈಗಾರಿಕಾ ಪ್ರದೇಶವು ಗ್ರಾಮ ಪಂಚಾಯಿತಿಯಿಂದ ನಗರಸಭಾ ವ್ಯಾಪ್ತಿಗೆ ಸೇರಿಕೊಂಡಿದೆ. ಹಲವು ವರ್ಷಗಳಿಂದ ಕೈಗಾರಿಕೆಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಲು ಸಮಸ್ಯೆಯಾಗುತ್ತಿದ್ದು, ಹೀಗಾಗಿ, ಗುಣಮಟ್ಟ ಹಾಗೂ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡಲು ಈಗಾಗಲೇ 220 ಕೆವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಯೂ ಪ್ರಗತಿಯಲ್ಲಿದೆ. ಮುಂದಿನ ವರ್ಷದೊಳಗೆ ಕಾಮಗಾರಿ ಮುಕ್ತಾಯವಾಗಲಿದೆ. ಇದರ ಜೊತೆಗೆ ನಿರಂತರವಾಗಿ ನೀರಿನ ವ್ಯವಸ್ಥೆ ಹಾಗೂ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲಾಗುತ್ತಿದ್ದು, ಕೈಗಾರಿಕೆಗಳ ಸ್ಥಾಪನೆಗೆ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಕೆಐಎಡಿಬಿ ಇಂಜಿನಿಯರ್ ಗೆ ಶಾಸಕ ಉದಯ್ ತರಾಟೆ

ಇನ್ನು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಕೆಐಎಡಿಬಿ ಎಇ ಸ್ಪೂರ್ತಿ ರಾಜ್ ಗೆ ಶಾಸಕ ಉದಯ್ ತರಾಟೆಗೆ ತೆಗೆದುಕೊಂಡ ಘಟನೆ ಜರುಗಿತು.

ಕೈಗಾರಿಕಾ ಪ್ರದೇಶದಲ್ಲಿ ಸರಿಯಾದ ಸ್ವಚ್ಚತೆ ಇಲ್ಲ. ಬೀದಿ ದೀಪಗಳ ನಿರ್ವಹಣೆ ಮಾಡುತ್ತಿಲ್ಲ. ಚರಂಡಿಗಳು ಗಬ್ಬೆದ್ದು ನಾರುತ್ತಿವೆ. ಇದೇನು ಕೈಗಾರಿಕಾ ಪ್ರದೇಶವೋ ಅಥವಾ ಹಾಳು ಕೊಂಪೆಯೋ ಇನ್ನೊಂದು ವಾರದಲ್ಲಿ ಎಲ್ಲವನ್ನು ಸರಿಪಡಿಸಿ ವರದಿ ನೀಡಬೇಕು ಇಲ್ಲದಿದ್ದರೆ ನಿಮ್ಮ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಕೈಗಾರಿಕೋದ್ಯಮಿಗಳ ಸಂಘದ ಕಾರ್ಯದರ್ಶಿ ಜಗನ್ನಾಥ್ ಪೂಜಾರಿ, ನಿರ್ದೇಶಕರಾದ ಕುಮಾರ್, ದಾಸೇಗೌಡ, ವಿಜಯ್ ಕುಮಾರ್, ಮನ್ ಮುಲ್ ನಿರ್ದೇಶಕ ಹರೀಶ್ ಬಾಬು, ಉದ್ಯಮಿ ಸಿಪಾಯಿ ಶ್ರೀನಿವಾಸ್ ಹಾಗೂ ವಿವಿಧ ಕೈಗಾರಿಕೆಗಳ ಸಂಪನ್ಮೂಲ ವ್ಯಕ್ತಿಗಳಾದ ಧರಣೇಂದ್ರ ಕುಮಾರ್, ರಾಜೇಶ್, ಭೈರಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಹೆಚ್.ರಾಜೇಂದ್ರ, ಗ್ರಾಪಂ ಮಾಜಿ ಉಪಾಧ್ಯಕ್ಷ ಪ್ರೀತಂ ಮತ್ತಿತರರು ಇದ್ದರು.

ವರದಿ : ಗಿರೀಶ್ ರಾಜ್, ಮಂಡ್ಯ

BIG NEWS: ಮೇ.20ರಿಂದ ರಾಜ್ಯದಲ್ಲಿ ಸಾರಿಗೆ ಸಮರ: ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರ ನಿರ್ಧಾರ

BREAKING: ರಾಜ್ಯದಲ್ಲಿ ಹಕ್ಕಿಜ್ವರದ ಭೀತಿ: ತುಮಕೂರಲ್ಲಿ ನವಿಲು H5N1 ನಿಂದ ಸಾವು ದೃಢ, ಕಟ್ಟೆಚ್ಚರಕ್ಕೆ ಸಚಿವ ಈಶ್ವರ್ ಖಂಡ್ರೆ ಸೂಚನೆ

Share. Facebook Twitter LinkedIn WhatsApp Email

Related Posts

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

1 Min Read

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

1 Min Read

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

1 Min Read
Recent News

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

BREAKING : `ECI’ ನಿರ್ಧಾರವು ಚುನಾವಣಾ ಪ್ರಕ್ರಿಯೆಗೆ ಮಾತ್ರ ಸೀಮಿತ, ಪೌರತ್ವದ ಅಂತಿಮ ತೀರ್ಪಲ್ಲ : ಸುಪ್ರೀಂ ಕೋರ್ಟ್

BREAKING : ಮತದಾರರ ಪಟ್ಟಿ ‘SIR’ ಗೆ ಗ್ರೀನ್ ಸಿಗ್ನಲ್ : ಚುನಾವಣಾ ಆಯೋಗದ ಅಧಿಕಾರ ಎತ್ತಿಹಿಡಿದ ಸುಪ್ರೀಂಕೋರ್ಟ್ | Supreme Court

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

State News
KARNATAKA

ಅತ್ತು ಕರೆದು ಡಿಕೆ ಡಿಸಿಎಂ ಶಿವಕುಮಾರ್ ಸಿಎಂ ಆಗುತ್ತಿದ್ದಾರೆ : ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ!

By ಸುರೇಶ್‌ KARNATAKA 1 Min Read

ಬೆಂಗಳೂರು : ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ಬಂದೇಯ ಗವಾಕ್ಷಿ ಅಂತ…

ರಾಜ್ಯಸಭೆ, ಪರಿಷತ್ ಚುನಾವಣೆ ಬಗ್ಗೆ ಮಾತ್ರ ಚರ್ಚೆ ಆಗಿದ್ದು ಸಿಎಂ ರಾಜೀನಾಮೆ ಎಲ್ಲಾ ಊಹಾಪೋಹ : MB ಪಾಟೀಲ್!

BREAKING : `CM’ ಸ್ಥಾನಕ್ಕೆ ಪರಮೇಶ್ವರ್ ಹೆಸರು ಪ್ರಸ್ತಾಪಿಸಿದ ಸಿದ್ದರಾಮಯ್ಯ.!

ನನ್ನ ರಾಜೀನಾಮೆ ಬಳಿಕ ಪರಮೇಶ್ವರ್ ಗೆ ಸಿಎಂ ಸ್ಥಾನ ಕೊಡಿ : ರಾಹುಲ್ ಗಾಂಧಿ ಮುಂದೆ ಪ್ರಸ್ತಾಪಿಸಿದ ಸಿದ್ದರಾಮಯ್ಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.