ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ( Karnataka Teacher Recruitment 2022 ) ಅರ್ಜಿಯನ್ನು ಆಹ್ವಾನಿಸಿ, ಪರೀಕ್ಷೆಯ ಬಳಿಕ ದಾಖಲಾತಿಯ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದೀಗ ಮುಂದುವರೆದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ.
ಮನೆ ನಿರೀಕ್ಷೆಯಲ್ಲಿದ್ದ ಜನರಿಗೆ ಗುಡ್ ನ್ಯೂಸ್: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಗೆ ಅರ್ಜಿ ಆಹ್ವಾನ
ಈ ಕುರಿತಂತೆ ಟ್ವಿಟ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Education Minister B.C Nagesh ) ಅವರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ( Appointment of Graduate Primary School Teachers ) ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.
ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ ಸಂಬಂಧಿಸಿದ 1:1 'ತಾತ್ಕಾಲಿಕ ಆಯ್ಕೆ' ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುವುದು.
— B.C Nagesh (@BCNagesh_bjp) November 15, 2022
ಅಂದಹಾಗೇ ಸ್ಪರ್ಧಾತ್ಮಕ ಪರೀಕ್ಷೆ ನಂತ್ರ, ನೇಮಕಾತಿಯಲ್ಲಿ ಅರ್ಹತೆಯನ್ನು ಪಡೆದಂತ ಅಭ್ಯರ್ಥಿಗಳ ಪಟ್ಟಿಯನ್ನು ಶಿಕ್ಷಣ ಇಲಾಖೆಯಿಂದ ಪ್ರಕಟಿಸಲಾಗಿತ್ತು. ಅದರಂತೆ 1:2 ಅನುಪಾತದಲ್ಲಿ ದಾಖಲಾತಿ ಪರಿಶೀಲನೆ ಕೂಡ ನಡೆಸಿ, ಮುಕ್ತಾಯಗೊಳಿಸಲಾಗಿತ್ತು. ಈಗ ಇದರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ.