ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆ ಬಳಿಕ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ರಾಜ್ಯ ಗೃಹ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಇಂದು ಈ ಕುರಿತಂತೆ ರಾಜ್ಯ ಗೃಹ ಇಲಾಖೆಯಿಂದ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಸಂಬಂಧ ಅಧಿಸೂಚನೆಯನ್ನು ಹೊರಡಿಸಲಾಗಿದೆ. ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದಂತ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆದಂತ ಸ್ಪರ್ಧಾತ್ಮಕ ಪರೀಕ್ಷೆಯ ನಂತ್ರ, ಅರ್ಹತೆಯನ್ನು ಪಡೆದಂತ ಅಭ್ಯರ್ಥಿಯಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಹೇಳಿದೆ.
ದಿನಾಂಕ 18-10-2024ರಲ್ಲಿ 545 ಪಿಎಸ್ಐ ಹುದ್ದೆಗಳ ನೇರ ನೇಮಕಾತಿ ಕುರಿತಂತೆ ಆಯ್ಕೆ ಪಟ್ಟಿಯನ್ನು ದಿನಾಂಕ 01-02-2023ರ ಸುತ್ತೋಲೆಯ ಅನ್ವಯ ತಯಾರಿಸಿ ಪ್ರಕಟಿಸಲಾಗಿದೆ. ದಿನಾಂಕ 06-06-2020ರ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40 ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ, ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವುದಾಗಿ ತಿಳಿಸಿದೆ.
ಆಯ್ಕೆ ಪಟ್ಟಿಯನ್ನು ಪ್ರಕಟಿಸಿರುವ ಸಂದರ್ಭದಲ್ಲಿ ಈ ಆಯ್ಕೆ ಪಟ್ಟಿಯು ಮಾನ್ಯ ಉಚ್ಛ ನ್ಯಾಯಾಲಯದ ರಿಟ್ ಪಿಟಿಷನ್ ನೀಡುವ ಅಂತಿಮ ತೀರ್ಪಿಗೆ ಒಳಪಟ್ಟಿರಲಿದೆ. ಈ ಆಯ್ಕೆ ಪಟ್ಟಿಯಲ್ಲಿ ವೃಂದ ಬದಲಾವಣೆ, ಮೀಸಲಾತಿ ಪ್ರವರ್ಗ ಬದಲಾವಣೆ, ಅರ್ಹತಾ ಪಟ್ಟಿಯಲ್ಲಿನ ಸ್ಥಾನ ಮತ್ತು ಘಟಕಗಳ ಬದಲಾವಣೆ ಆಗುವ ಸಾಧ್ಯತೆಗಳಿಗೆ ಒಳಪಟ್ಟಿರುತ್ತದೆ ಎಂಬ ಷರತ್ತು ವಿಧಿಸಲಾಗಿದೆ ಎಂದಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಸಿ.ಪಿ ಯೋಗೇಶ್ವರ್ ಘೋಷಣೆ
BIG NEWS: ಹಾಸನಾಂಬ ದೇವಾಲಯ ಓಪನ್ ಗೆ ಮುಹೂರ್ತ ಫಿಕ್ಸ್: ಅ.24ರಂದು ಮಧ್ಯಾಹ್ನ 12ಕ್ಕೆ ಬಾಗಿಲು ಓಪನ್