ಬೆಂಗಳೂರು : ಪಿಎಸ್ಐ ಸಿಟಿಐ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರುವ ಪ್ರಕರಣ ಪಿ ಎಸ್ ಐ ಲಿಂಗಯ್ಯನನ್ನು ಸಿಸಿಬಿ ಅಧಿಕಾರಿಗಳು ವಶಕೆ ಪಡೆದುಕೊಂಡು ಇದೀಗ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಇಂಟಲಿಜೆನ್ಸ್ ವಿಭಾಗದಲ್ಲಿ ಲಿಂಗಯ್ಯ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಹೀಗಾಗಿ ನಿನ್ನೆಯೇ ಸಿಸಿಬಿ ಅಧಿಕಾರಿಗಳು ಲಿಂಗಯ್ಯನನ್ನು ವಶಕ್ಕೆ ಪಡೆದು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ವಾಟ್ಸಪ್ ಚಾಟ್ ಒಂದಿಷ್ಟು ಸ್ಕ್ರೀನ್ ಶಾಟ್ಗಳು ಕೂಡ ವೈರಲ್ ಆಗಿವೆ ಎಂದು ಹೇಳಲಾಗುತ್ತಿದೆ. ಮಾತುಕತೆಯ ನಡೆಸಿದ್ದು ಯಾರು ಅನ್ನೋದನ್ನ ಸಿಸಿಬಿ ಅಧಿಕಾರಿಗಳು ಇದೀಗ ವಿಚಾರಣೆ ವೇಳೆ ಪತ್ತೆ ಹಚ್ಚಲಿದ್ದಾರೆ. ಲಿಂಗಯ್ಯ ಜೊತೆ ಮಾತುಕತೆ ನಡೆಸಿದವರ ವಿಚಾರ ನಡೆಸಲು ಸಿಸಿ ವೇದಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಪ್ರಕರಣ ಹಿನ್ನೆಲೆ?
ಪಿ.ಎಸ್.ಐ.ಮತ್ತು ಸಿಟಿಐ ಪರೀಕ್ಷೆ ಪತ್ರಿಕೆ ಲೀಕ್ ಮಾಡಿರುವ ಆರೋಪ ಕೇಳಿ ಬಂದಿದೆ. ಇಂಟೆಲಿಜೆನ್ಸ್ ವಿಭಾಗದಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಲಿಂಗಯ್ಯ ಎಂಬ ಅಧಿಕಾರಿ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದಾರೆ ಎಂದು ಅರೋಪಿಸಲಾಗಿದೆ.
545 ಪಿಎಸ್ಐ ಹುದ್ದೆ ಸಿಟಿಐ ಕೆಪಿಎಸ್ಸಿ ನಡೆಸುತ್ತಿರುವ ಪರೀಕ್ಷೆ ಇದಾಗಿದೆ. ಇತ್ತ ಲಿಂಗಯ್ಯ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಹಾಗೂ ವಾಟ್ಸ್ಆ್ಯಪ್ ಸಂದೇಶಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೂರಾರು ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮಾಡಿದ್ದಾರೆ.
ಹಣಕ್ಕೆ ಬೇಡಿಕೆ, ಪರೀಕ್ಷೆ ವಿಚಾರವಾಗಿ ಡೀಲ್ ಬಗ್ಗೆ ಲಿಂಗಯ್ಯ ಮಾತಾಡಿದ್ದಾರೆ ಎನ್ನುವ ಆಡಿಯೋ, ವಾಟ್ಸಾಪ್ ಚಾಟ್ ವೈರಲ್ ಹಿನ್ನೆಲೆ ಚಂದ್ರಾಲೇಔಟ್ ಠಾಣೆಯಲ್ಲಿ ಪರೀಕ್ಷಾರ್ಥಿಗಳು ದೂರು ನೀಡಿದ್ದಾರೆ. ಇತ್ತ ನೂರಾರು ಪರೀಕ್ಷಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಆರೋಪಿಸಿ ದೂರು ದಾಖಲಿಸುತ್ತಿದ್ದಂತೆ ಎಚ್ಚೆತ್ತ ಸಿಸಿಬಿ ಅಧಿಕಾರಿಗಳು ಪಿಎಸ್ಐ ಲಿಂಗಯ್ಯ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.