ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಬಳಿ ಇರುವ ತುಂಗಾ ನದಿ ತೀರದಲ್ಲಿ ಅಕ್ರಮ ಮರಳು ದಂಧೆಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶೃಂಗೇರಿ ಪೊಲೀಸ್ ಠಾಣೆಯ ಪಿಎಸ್ಐ ಜಕ್ಕಣ್ಣನವರ್ ನನ್ನು ಅಮಾನತು ಮಾಡಲಾಗಿದೆ.
ಹೌದು ತುಂಗಾನದಿ ತೀರದಲ್ಲಿ ಅಕ್ರಮ ಮರಳು ದಂಧೆಗೆ ಅವಕಾಶ ನೀಡಿದ ಆರೋಪದ ಹಿನ್ನೆಲೆ ಚಿಕ್ಕಮಂಗಳೂರು ಜಿಲ್ಲೆಯ ಶೃಂಗೇರಿ ಪಿಎಸ್ಐ ಠಾಣೆ ಜಕ್ಕಣ್ಣನವರ್ ನನ್ನು ಅಮಾನತು ಮಾಡಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಮರಳು ದಂಧೆ, ಬಜರಂಗದಳ ಕಾರ್ಯಕರ್ತರಿಂದ ನೈತಿಕ ಪೊಲೀಸ್ ಗಿರಿ ಸೇರಿದಂತೆ ಒಟ್ಟು ನಾಲ್ಕು ಕಾರಣಗಳನ್ನು ನೀಡಿ ಪಿಎಸ್ಐ ಜಕ್ಕಣ್ಣನವರನ್ನು ಅಮಾನತು ಮಾಡಲಾಗಿದೆ.