ಶಿವಮೊಗ್ಗ: ಸಾಗರ ಟೌನ್ ಠಾಣೆಯ ಪಿಎಸ್ಐ ಟಿ.ಎಂ ನಾಗರಾಜು ಹಾಗೂ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸಿದ್ರಾಮಪ್ಪ ಅವರನ್ನು ವರ್ಗಾವಣೆ ಮಾಡಿ ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರು ಆದೇಶಿಸಿದ್ದಾರೆ.
ಈ ಕುರಿತಂತೆ ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರಾದಂತ ಡಾ.ಬಿಆರ್ ರವಿಕಾಂತೇಗೌಡ ಅವರು ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ಟೌನ್ ಠಾಣೆಯ ಪಿಎಸ್ಐ ಆಗಿದ್ದಂತ ಟಿ.ಎಂ ನಾಗರಾಜು ಅವರನ್ನು ಹಾವೇರಿ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಇನ್ನೂ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಸಿದ್ರಾಮಪ್ಪ ಅವರನ್ನು ಸ್ಥಳ ತೋರಿಸದೇ ದಾವಣಗೆರೆಯ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕರ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಸಾಗರ ಟೌನ್ ಠಾಣೆ-3ಯ ಪಿಎಸ್ಐ ಅಕ್ಬರ್ ಮುಲ್ಲಾ ಅವರನ್ನು ಶಿವಮೊಗ್ಗದ ಪೂರ್ವ ಟ್ರಾಫಿಕ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದರೇ, ಶಿವಮೊಗ್ಗ ಪಶ್ಚಿಮ ಟ್ರಾಫಿಕ್ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ಅವರನ್ನು ಸ್ಥಳ ತೋರಿಸದೇ ದಾವಣಗೆರೆಯ ಐಜಿ ವಲಯ ಕಚೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?
ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಯತ್ನ: ರೈಲು ಸಂಚಾರ ಪುನರಾರಂಭ