ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ( PSI Recruitment Scam ) ಸಂಬಂಧ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಇದೇ ಪ್ರಕರಣದಲ್ಲಿ ಅಕ್ರಮ ನಡೆಸಿದ ಆರೋಪ ಹೊತ್ತಿದ್ದಂತ ನೇಮಕಾತಿ ವಿಭಾಗದ ಹೊಣೆ ಹೊತ್ತಿದ್ದ ಆರೋಪಿತ ಅಧಿಕಾರಿ ಅಮೃತ್ ಪಾಲ್ ಅವರನ್ನು ಬಂಧಿಸಲಾಗಿತ್ತು. ಅವರೀಗ ಕಾನೂನು ಬಂಧನದಲ್ಲಿದ್ದಾರೆ. ಇಂತಹ ಆರೋಪಿತ ಅಧಿಕಾರಿ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಇಂದು ಪಿಎಸ್ಐ ನೇಮಕಾತಿ ಅಕ್ರಮ ನಡೆಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಆರೋಪಿತ ಅಧಿಕಾರಿ ಅಮೃತ್ ಪಾಲ್ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೈಗೆತ್ತಿಕೊಂಡ ಬೆಂಗಳೂರಿನ 24ನೇ ಸಿಸಿ ಹೆಚ್ ಕೋರ್ಟ್, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಅಂದಹಾಗೇ 545 ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಅಮೃತ್ ಪಾಲ್ ಅವರು ನೇಮಕಾತಿ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ಈ ಪ್ರಕರಣದಲ್ಲಿ ಲಕ್ಷ ಲಕ್ಷ ಡೀಲ್ ಮೂಲಕ ಪರೀಕ್ಷೆಯಲ್ಲಿ ಅಕ್ರಮ ನಡೆಸಿರೋದಾಗಿ ತನಿಖೆಯಿಂದ ತಿಳಿದು ಬಂದಿತ್ತು. ಬ್ಲೂಟೂತ್ ಬಳಸಿ ಅಕ್ರಮ ವೆಸಗಿರೋದಾಗಿಯೂ ತಿಳಿದಿತ್ತು. ಈಗಾಗಗೇ ಈ ಪ್ರಕರಣದಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ.