ಬೆಂಗಳೂರು: ರಾಜ್ಯದಲ್ಲಿ ಬಹುದೊಡ್ಡ ಹಗರಣವೆಂದೇ ಕರೆಯಲಾಗುವಂತ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇನ್ನೂ ಹಲವರ ವಿರುದ್ಧ ತನಿಖೆ ಮುಂದುವರೆಸಿದೆ. ಇಂತಹ ಸಂದರ್ಭದಲ್ಲಿಯೇ ಭ್ರಷ್ಟ ಅಧಿಕಾರಿಗಳಿಗೆ ಸಿಐಟಿ ಶಾಕ್ ನೀಡಿದೆ. ಅದೇ ಅಮೃತ್ ಪೌಲ್ ಸೇರಿದಂತೆ 7 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
ಪಿಎಸ್ಐ ಪರೀಕ್ಷೆ ಅಕ್ರಮ ಸಂಬಂಧ ಸಿಐಡಿ ಸಮರವನ್ನು ಮುಂದುವರೆಸಿದೆ. ಇದೀಗ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವಂತ ಅಮೃತ್ ಪೌಲ್ ಸೇರಿದಂತೆ 7 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದೆ. ಈ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ಬಿಗ್ ಶಾಕ್ ಅನ್ನು ಸಿಐಡಿ ನೀಡಿದೆ.
ಅಂದಹಾಗೇ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ 10ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೂ ತನಿಖೆಯನ್ನು ಮುಂದುವರೆಸಿರುವಂತ ಸಿಐಡಿ ಹಲವರ ಬಂಧನಕ್ಕೂ ಬಲೆ ಬೀಸಿದೆ.