ವಿಜಯಪುರ: ಪಿಎಸ್ ಐ ನೇಮಕಾತಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಿ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
BREAKING NEWS: ಸೋನಿಯಾ ಗಾಂಧಿ ಮಾರ್ಗ ಬದಲಾವಣೆ; ಮಡಿಕೇರಿ ಬದಲು ಕಬಿನಿಯತ್ತ ತೆರಳಿದ ಕಾಂಗ್ರೆಸ್ ಅಧ್ಯಕ್ಷೆ
ನಗರದಲ್ಲಿ ಮಾತನಾಡಿದ ಅವರು, ಇಡೀ ಪ್ರಕರಣದಲ್ಲಿ ಮಾಜಿ ಸಿಎಂ ಪುತ್ರನ ಕೈವಾಡವಿದೆ. ಇದನ್ನೇ ಮಾಜಿ ಸಿಎಂ ಹೆಚ್ .ಡಿ ಕುಮಾರಸ್ವಾಮಿ ಹೇಳಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಹತ್ತು ಬಾರಿ ನನಗೆ ಪ್ರಶ್ನೆ ಕೇಳಿದ್ದಾರೆ. ಮಾಜಿ ಸಿಎಂ ಪುತ್ರನ ಕೈವಾಡದ ಬಗ್ಗೆ ನನಗೆ ಪ್ರಶ್ನೇ ಕೇಳಿದ್ದಾರೆ. ಸಿಬಿಐ ತನಿಖೆಗೆ ವಹಿಸಿದರೆ ಯಾರು ಕಳ್ಳ ಎಂದು ಗೊತ್ತಾಗಲಿದೆ. ಎಡಿಜಿಪಿ ಒಬ್ಬರನ್ನೇ ಅರೆಸ್ಟ್ ಮಾಡಿ ಎಫ್ ಐಆರ್ ದಾಖಲಿಸಿದ್ದಾರೆ. ಇದರಲ್ಲಿ ಎಡಿಜಿಪಿ ಒಬ್ಬರೇ ಶಾಮೀಲಾಗಿಲ್ಲ. ಇದರ ಹಿಂದೆ ದೊಡ್ಡ ಕಳ್ಳರಿದ್ದಾರೆ. ಈ ನಿಟ್ಟಿನಲ್ಲಿ ಸಿಬಿಐ ತನಿಖೆಗೆ ಬಹಿಸಬೇಕೆಂದು ಮನವ ಮಾಡಿದ್ದೇನೆ ಎಂದರು.