ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಸಂಬಂಧಸಿದ ಹಾಗೇ ರಾಜ್ಯ ಸರ್ಕಾರ ಹಾಗೂ ಸಿಐಡಿಗೆ ರಾಜ್ಯ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಪ್ರಕರಣದ ತನಿಖಾ ಪ್ರಗತಿ ಬಗ್ಗೆ ತಿಳಿಸುವಂತೆ ಸೂಚನೆ ನೀಡಿದೆ. ಇನ್ನೂ ಶಾಸಕ ಪ್ರಿಯಾಂಕ್ ಖರ್ಗೆ ಯವರು, ಕೋರ್ಟ್ ನಿಗದಲ್ಲಿ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದರು. ಇಲ್ಲಿಯವರೆಗೆ ನಡೆದಿರುವ ತನಿಖೆ, ತೆಗೆದುಕೊಂಡಂತಹ ಕ್ರಮದ ಬಗ್ಗೆ ವರದಿನೀಡುವಂತೆ ಸೂಚನೆ ನೀಡಿದ್ದು ವಾರದ ಒಳಗೆ ಎಲ್ಲಾ ವರದಿ ಸಲ್ಲಿಸಿ ಎಂದು ಸೂಚಿಸಿದೆ