ಬೆಂಗಳೂರು : 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ (PSI Recruitment Scam) ನಡೆದಿದ್ದು, ಈ ಹಿನ್ನೆಲೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಮುಂದಿನ ಆದೇಶದವರೆಗೆ 545 ಪಿಎಸ್ಐ ಮರುಪರೀಕ್ಷೆ ದಿನಾಂಕ ಪ್ರಕಟಿಸಬಾರದು ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ಆದೇಶ ಹೊರಡಿಸಿದೆ. ಮರುಪರೀಕ್ಷೆ ರದ್ದು ಕೋರಿ ಹಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಕೋರ್ಟ್ ಆದೇಶ ಹೊರಡಿಸಿದೆ.
ಕರ್ನಾಟಕ ಪೊಲೀಸ್ ಇಲಾಖೆಯು 545 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಆರೋಪದ ಹಿನ್ನೆಲೆ, ಆರೋಪಿಗಳ ಮೇಲೆ ತನಿಖೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ದಿನೇ ದಿನೇ ಅಕ್ರಮದಲ್ಲಿ ಪಾಲ್ಗೊಂಡವರ ಸಂಖ್ಯೆ ಹೆಚ್ಚಾಗೆ ಸಿಐಡಿ ತನಿಖೆಯಿಂದ ಹೊರಬೀಳುತ್ತಿದೆ.
ಈ ಹಿಂದೆ ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಮರುಪರೀಕ್ಷೆಗೆ ದಿನಾಂಕವನ್ನು ಶೀಘ್ರದಲ್ಲೇ ನಿಗದಿಮಾಡಿ, ಪ್ರಕಟಿಸಲಾಗುವುದು ಎಂದು ಹೇಳಿದ್ದರು. ಮರು ಪರೀಕ್ಷೆಯಲ್ಲಿ ಈ ಹಿಂದೆ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ನೀಡಲಿದ್ದು, ಆಪಾಧಿತರಿಗೆ ಈ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಬೆಂಗಳೂರಿನ ಕೆಲವು ಸೆಂಟರ್ಗಳಲ್ಲೂ ಈ ಪರೀಕ್ಷೆಯಲ್ಲಿ ಅಕ್ರಮ ಆರೋಪ ಕೇಳಿಬಂದಿದೆ. ಆದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವರು ಸುದ್ದಿಗೋಷ್ಠಿಯಲ್ಲಿಹೇಳಿದ್ದರು.
ಕರ್ನಾಟಕದಲ್ಲಿ ಪಿಎಸ್ಐ ಹುದ್ದೆಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದರು. ಈ ಹಿಂದೆ ನಡೆದಿದ್ದ ಪಿಎಸ್ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಬೆಂಗಳೂರಿನ ಕೇಂದ್ರದಲ್ಲೂ ಅಕ್ರಮದ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆಗೆ ನಿರ್ಧರಿಸಲಾಗಿದೆ. ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಮರು ಪರೀಕ್ಷೆ ನಡೆಸಲಾಗುವುದು.. ಶೀಘ್ರವೇ ಮರು ಪರೀಕ್ಷೆ ದಿನಾಂಕ ಪ್ರಕಟಿಸುತ್ತೇವೆ ಎಂದು ಹೇಳಿದ್ದರು.ಆದರೀಗ 545 ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ (PSI Recruitment Scam) ನಡೆದ ಹಿನ್ನೆಲೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
BIG NEWS: ಅ. 1 ರಿಂದ ಎಲ್ಲರಿಗೂ ಅನ್ವಯಿಸುವುದಿಲ್ಲ ಈ ಪಿಂಚಣಿ ಯೋಜನೆ… ಇಲ್ಲಿದೆ ಮಹತ್ವದ ಮಾಹಿತಿ | Pension Scheme