ಬೆಂಗಳೂರು: ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ -2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ. 1.00 ಲಕ್ಷಗಳವರೆಗೆ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಂದ 7 ವರ್ಷಗಳವರೆಗೆ ವಿಧಿಸಲಾಗುವುದು.
ಸಾರ್ವಜನಿಕ ಸ್ಥಳಗಳಲ್ಲಿ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಆಯಾ ಜಿಲ್ಲೆಯಲ್ಲಿ ಇರುವಂತ ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಬಹುದು. ಆ ಮೂಲಕ ಮಾಹಿತಿ ನೀಡಿದ್ರೇ, ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಲಾಖೆ ಕೂಡ ಇರಿಸಲಿದೆ ಎಂಬುದಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಎನ್‌ಜಿಓಗಳಿಂದ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವು 2025-26ನೇ ಸಾಲಿಗೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ‘ಕಣ್ಣಿನ ಪೊರೆ ಶಸ್ತçಚಿಕಿತ್ಸಾ ಶಿಬಿರ ಹಾಗೂ ಇತರ ಕಣ್ಣಿನ ಖಾಯಿಲೆಗಳ ಚಿಕಿತ್ಸಾ’ ಕಾರ್ಯಕ್ರಮಕ್ಕಾಗಿ ಆಸಕ್ತಿಯುಳ್ಳ ಹಾಗೂ ಅನುಭವವುಳ್ಳ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ (ಎನ್‌ಜಿಓ) ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನ.06ರವರೆಗೆ ವಿಸ್ತರಣೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ವಿವರಗಳಿಗೆ ವೆಬ್‌ಸೈಟ್ https://kppp.karnataka.gov.in/#/portal/portal-home ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಶಿವಮೊಗ್ಗ, ದೂ.ಸಂ.: 8197094440/08182-222382 ಗಳನ್ನು ಸಂಪರ್ಕಿಸುವುದು.
BREAKING: ನಟ ದರ್ಶನ್, ಪವಿತ್ರಾಗೌಡ ಮತ್ತು ಇತರರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ; ನ.10ರಂದು ವಿಚಾರಣೆ ದಿನಾಂಕ ನಿಗದಿ
BREAKING: ರೇಣುಕಾಸ್ವಾಮಿ ಕೊಲೆ ಕೇಸ್: ತಮ್ಮ ವಿರುದ್ಧ ಆರೋಪ ನಿರಾಕರಿಸಿದ ನಟ ದರ್ಶನ್ ಅಂಡ್ ಗ್ಯಾಂಗ್








