ಬೆಂಗಳೂರು: ರಾಜ್ಯಾಧ್ಯಂತ ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಕೇವಲ ಪರಿಸರ ಸ್ನೇಹಿ ಗಣೇಶ ಮೂರ್ತಿಯನ್ನು ತಯಾರಿಸಿ, ಬಳಕೆ ಮಾಡಲು ಅವಕಾಶ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡಿದ್ರೇ 10,000 ದಂಡ ಹಾಗೂ ಜೈಲು ಶಿಕ್ಷೆ ಕಾಯಂ ಎಂಬುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಿದ್ದು, ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಬಳಸುವ ಮೂಲಕ ಪರಿಸರ ಸ್ನೇಹಿ ಹಬ್ಬ ಆಚರಿಸಬೇಕು ಎಂದು ಮನವಿ ಮಾಡಲಾಗಿದೆ.
ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ಮಾಡುವುದು ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ33(ಎ) ರನ್ವಯ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದು ಕಾನೂನು ಬಾಹೀರವಾಗಿದೆ. ಕಾಯ್ದೆಯನ್ನು ಉಲ್ಲಂಘಿಸಿದಲ್ಲಿ ಜಲಮಾಲಿನ್ಯ(ತಡೆ ಮತ್ತು ನಿಯಂತ್ರಣ)ಕಾಯ್ದೆ 1974ರ ಕಲಂ45(ಎ)ರನ್ವಯ ರೂ.10,000/-ಗಳ ವರೆಗೆ ದಂಡ ವಿಧಿಸಬಹುದಾಗಿದ್ದು ಮತ್ತು ಜೈಲುವಾಸ ಸಹ ವಿಧಿಸಬಹುದಾಗಿದೆ ಎಂಬುದಾಗಿ ಎಚ್ಚರಿಕೆ ನೀಡಿದೆ.
ರಾಜ್ಯಾಧ್ಯಂತ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಗ್ರಾಮ ಪಂಚಾಯ್ತಿ ಅಧಿಕಾರಿಗಳು ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟದ ಬಗ್ಗೆ ಹದ್ದಿನ ಕಣ್ಣಿಟ್ಟಿದ್ದಾರೆ. ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಓಪಿ) ಮತ್ತು ಬಣ್ಣಲೇಪಿತ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡುವುದನ್ನು ಕಂಡುಬಂದಲ್ಲಿ ಅಂತವರ ವಿರುದ್ಧ ಪ್ರಕರಣ ದಾಖಲಿಸಲಿದ್ದಾರೆ ಎಂಬುದಾಗಿ ತಿಳಿಸಿದೆ.
ಅಲ್ಲದೇ ಪರಿಸರ ಸ್ನೇಹಿ ಮಣ್ಣಿನಿಂದ ಮಾಡಿದ ಗಣೇಶ ವಿಗ್ರಹಗಳನ್ನು ತಯಾರಿಕೆ ಹಾಗೂ ಬಳಕೆ ಮಾಡಬೇಕು ಎಂದು ರಾಜ್ಯ ಸರ್ಕಾರ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಧರ್ಮಸ್ಥಳ ಕೇಸ್: ’13ನೇ ಪಾಯಿಂಟ್’ನಲ್ಲಿ 18 ಅಡಿ ಅಗೆದರು ಸಿಗದ ಅಸ್ಥಿ ಪಂಜರ, ಉತ್ಕನನ ಮುಕ್ತಾಯ
BREAKING: ಶಿವಮೊಗ್ಗ ಜಿಲ್ಲೆಯಾಧ್ಯಂತ ಗಣೇಶ, ಈದ್ ಮಿಲಾದ್ ಹಬ್ಬದ ವೇಳೆ ಡಿಜೆ ಸಿಸ್ಟಂ ಬಳಕೆ ನಿಷೇಧ-DC ಆದೇಶ