ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಎಲ್ಲಾ ಶಾಲೆಗಳು ಪುನರಾರಂಭವಾಗುತ್ತಿದ್ದು, ಈ ವರ್ಷವೂ 5, 8 ಮತ್ತು 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ನಿರ್ಧಿಸಿದೆ.
2024-25ರ ಶೈಕ್ಷಣಿಕ ವರ್ಷದಲ್ಲಿಯೂ 5, 8 ಮತ್ತು 9ನೇ ತರಗತಿಗೆ ಮೌಲ್ಯಾಂಕನ ಪರೀಕ್ಷೆ ಇರಲಿದೆ ಎಂದು ಶಾಲಾ ಶಿಕ್ಷಣ ಇಲಾಖೆ ದೃಢಪಡಿಸಿದೆ. 2023-24ರ ಸಾಲಿನಲ್ಲಿ ಈ ತರಗತಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಿ ಅದು ಕಾನೂನಿನ ಬಿಕ್ಕಟ್ಟಿಗೆ ಸಿಲುಕಿಕೊಂಡು ಸದ್ಯ ಫಲಿತಾಂಶ ಪ್ರಕಟಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಪ್ರಕರಣ ನ್ಯಾಯಾಲಯದಲ್ಲಿ ದ್ದರೂ ಸಹ ಮುಂದಿನ ಶೈಕ್ಷಣಿಕ ವರ್ಷದಲ್ಲಿಯೂ ಮೌಲ್ಯಾಂಕನ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಈ ಬಗ್ಗೆ ಶೈಕ್ಷಣಿಕ ಮಾರ್ಗದರ್ಶಿ-2024-25ರಲ್ಲಿ ಉಲ್ಲೇಖಿಸಿದ್ದು, ಸೆಪ್ಟೆಂಬರ್ನಲ್ಲಿ ಮೌಲ್ಯಾಂ ಕನ-1 ಮತ್ತು ಮಾರ್ಚ್ನಲ್ಲಿ ಮೌಲ್ಯಾಂಕನ -2 ಮಾಡಿ ಏಪ್ರಿಲ್ನಲ್ಲಿ ಫಲಿತಾಂಶ ಪ್ರಕಟಿಸುವುದಾಗಿ ತಿಳಿಸಿದೆ.