ಶಿವಮೊಗ್ಗ : ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಸೆಪ್ಟಂಬರ್-2022ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು.
ಸೆ-23 ರಂದು ಬೆಳಿಗ್ಗೆ 11.30 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸಾಗರ ತಾಲೂಕು ಪಂಚಾಯತ್ ಸಭಾಂಗಣ, ಸೆ-27 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಹೊಸನಗರ ತಾಲೂಕು ಪಂಚಾಯತ್ ಸಭಾಂಗಣ ಮತ್ತು ಮ. 03-00 ರಿಂದ ಸಂ. 5.00ರವರೆಗೆ ತೀರ್ಥಹಳ್ಳಿ ತಾಲೂಕು ಪಂಚಾಯತ್ ಸಭಾಂಗಣ, ಸೆ-28 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ, ಸೆ-30 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ಸೊರಬ ತಾಲೂಕು ಪಂಚಾಯತ್ ಸಭಾಂಗಣ ಹಾಗೂ ಮ. 03-00 ರಿಂದ ಸಂ. 5.00ರವರೆಗೆ ಶಿಕಾರಿಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದೆ.
ಸಾರ್ವಜನಿಕರು ಸರ್ಕಾರಿ ಕರ್ತವ್ಯ ನಿರ್ವಹಿಸಲು ವಿಳಂಬ ಮತ್ತು ನಿರ್ಲಕ್ಷ್ಯ ತೋರಿಸಿದ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಲಿಖಿತ ಅಹವಾಲು ಸಲ್ಲಿಸಬಹುದು ಎಂದು ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
BREAKING NEWS: ಮ್ಯಾನ್ಮಾರ್ನ ಶಾಲೆ ಮೇಲೆ ಸೇನಾ ಹೆಲಿಕಾಪ್ಟರ್ ದಾಳಿ: 7 ಮಕ್ಕಳು ಸೇರಿದಂತೆ 13 ಮಂದಿ ಸಾವು