ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಸಾರ್ವತ್ರಿಕ ಚುನಾವಣೆಯ ಮತದಾನ ಇದೇ ಮೇ 7 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ನಡೆಯಲಿದ್ದು, ಬಿಸಿಲು ತಾಪ ಹೆಚ್ಚಳ ಹಿನ್ನೆಲೆಯಲ್ಲಿ ಮತದಾರರು ಮತದಾನ ಮಾಡಲು ಬರುವಾಗ ಚಿಕ್ಕ ಮಕ್ಕಳನ್ನು ಕರೆತರಬಾರದೆಂದು ಚುನಾವಣಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಮತದಾನ ಮಾಡಲು ಬರುವಾಗ ಮತದಾರರು ತಲೆಯ ಮೇಲೆ ಕ್ಯಾಪ್ ಅಥವಾ ಬಿಳಿ ಬಟ್ಟೆಯನ್ನು ಹಾಕಿಕೊಂಡು ಬರುವ ಮೂಲಕ ಬಿಸಿಲಿನಿಂದ ರಕ್ಷಣೆ ಮಾಡಿಕೊಳ್ಳುವಂತೆ ಕೋರಿದ್ದಾರೆ. ಮೇ 7 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೆ ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿದ್ದು, ಮತದಾರರು ಬಿಸಿಲಿನಿಂದ ರಕ್ಷಣೆ ಪಡೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಗುಲ್ಬರ್ಗಾ, ರಾಯಚೂರು, ಬೀದರ್, ಕೊಪ್ಪಳ. ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

Share.
Exit mobile version