ಬೆಂಗಳೂರು : ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ Advisory and Do’s and Don’ts on Thunderstorm & Lightning- No.16/28/2023-RR ರಲ್ಲಿ ಸಲಹೆ/ಸೂಚನೆಗಳ ಬಗ್ಗೆ ವಿವರಿಸಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು – ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.ಸಿಡಿಲು / ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನ ಕೈಗೊಳ್ಳುವಂತೆ ಸೂಚಿಸಲಾಗಿದೆ:
ಸಿಡಿಲು / ಮಿಂಚು ಬಡಿದಾಗ ಪಾಲಿಸಬೇಕಾದ ಪ್ರಥಮ ಚಿಕಿತ್ಸಾ ವಿಧಾನ :
1. ಸಿಡಿಲು / ಮಿಂಚು ಬಡಿದ ಸಮಯದಲ್ಲಿ ಪ್ರಾಥಮಿಕವಾಗಿ 112 / 108 ಸಹಾಯವಾಣಿಗೆ ಕರೆ ಮಾಡಬೇಕು.
2. ವೈದ್ಯಕೀಯ ಸಿಬ್ಬಂದಿಯು ಆಗಮಿಸುವ ಮುನ್ನವೇ ಈ ಕೆಳಕಂಡಂತೆ ನೀಡುವ ಅಗತ್ಯ ಪ್ರಥಮ ಚಿಕಿತ್ಸೆಯಿಂದ ಸಿಡಿಲು / ಮಿಂಚಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಜೀವವನ್ನು ಉಳಿಸಬಹುದಾಗಿದೆ. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ದೇಹದಲ್ಲಿ ಯಾವುದೇ ವಿದ್ಯುತ್ ಕಣಗಳು( electrical charges) ಸಂಚಾರವಾಗುವುದಿಲ್ಲ. ಆದ್ದರಿಂದ, ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ಮುಟ್ಟಿ ಉಪಚರಿಸುವ ವ್ಯಕ್ತಿಗೆ ಯಾವುದೇ ಅಪಾಯವಿರುವುದಿಲ್ಲ.
3. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಉಸಿರಾಟ ಹಾಗೂ ಎದೆ ಬಡಿತವನ್ನು ಪರೀಕ್ಷಿಸಬೇಕು. ವ್ಯಕ್ತಿಯ ದವಡೆಗೆ ನೇರವಾಗಿ ಕುತ್ತಿಗೆಯಲ್ಲಿರುವ ರಕ್ತನಾಳವನ್ನು (Carotid Artery) ಪರೀಕ್ಷಿಸುವುದರಿಂದ ಸುಲಭವಾಗಿ ನಾಡಿ ಮಿಡಿತವನ್ನು ತಿಳಿಯಬಹುದು.
4. ವ್ಯಕ್ತಿಯಲ್ಲಿ ಉಸಿರಾಟವು ಕಂಡು ಬರದಿದ್ದಲ್ಲಿ, ತಕ್ಷಣವೇ ಕೃತಕ ಉಸಿರಾಟ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ವ್ಯಕ್ತಿಯಲ್ಲಿ ಎದೆಬಡಿತವು ಕಂಡು ಬರದಿದ್ದಲ್ಲಿ ತಕ್ಷಣವೇ Cardiac compressions ಹಾಗೂ Cardiopulmonary Resuscitation ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.
5. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯ ಕಣ್ಣಿನ ದೃಷ್ಟಿ, ಕಿವಿಕೇಳಿಸುವಿಕೆ ಹಾಗೂ ಮೂಳೆಗಳ ಮುರಿದಿವೆಯೇ ಎಂದು ಪರೀಕ್ಷಿಸಬೇಕು, ಇದರಿಂದ ಪಾರ್ಶ್ವವಾಯು/ ಲಕ್ಷಾ ಹೊಡೆಯುವುದನ್ನು ಮತ್ತು ಅಧಿಕ ರಕ್ತಸ್ರಾವದಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಬಹುದು.
6. ಸಿಡಿಲು ಬಡಿಯುವ ಸಾಧ್ಯತೆಯು ಮುಂದುವರೆಯುವುದರ ಬಗ್ಗೆ ಈಗಾಗಲೇ ಸಿಡಿಲಿನ ಹೊಡೆತಕ್ಕೆ ಒಳಗಾಗಿರುವ ವ್ಯಕ್ತಿ ಹಾಗೂ ಅವರನ್ನು ರಕ್ಷಿಸುವವರು ಎಚ್ಚರವಹಿಸಬೇಕು.
ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ಅಪಾಯಕಾರಿ ಸ್ಥಳದಲ್ಲಿದ್ದರೆ. ತಕ್ಷಣವೇ ಅವನನ್ನು / ಅವಳನ್ನು ಸೂಕ್ತ ರಕ್ಷಣಾ ಸ್ಥಳಕ್ಕೆ ಸ್ಥಳಾಂತರಿಸಬೇಕು.
7. ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯು ವಿವಿಧ ರೀತಿಯ ಸುಟ್ಟಗಾಯಗಳಿಂದ ಬಳಲಬಹುದು ಹಾಗೂ ಕಾಣದ ಗಾಯಗಳು/ ಅಘಾತಕ್ಕೆ ಒಳಗಾಗಿರಬಹುದು. ಆದ್ದರಿಂದ, ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳಿದ್ದಲ್ಲಿ, ಸೂಕ್ತ ಚಿಕಿತ್ಸೆಗಾಗಿ ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಕಳುಹಿಸಬೇಕು.
8. ಸಿಡಿಲು ಬಡಿದಿರುವ ವ್ಯಕ್ತಿಯಿರುವ ಸ್ಥಳಕ್ಕೆ ತಲುಪಲು ಹಾಗೂ ಸಿಡಿಲು ಬಡಿತಕ್ಕೆ ಒಳಗಾದ ವ್ಯಕ್ತಿಯ ಆರೋಗ್ಯಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ನೀಡಬೇಕು ಮತ್ತು ಸಿಡಿಲಿನ ಹೊಡೆತಕ್ಕೆ ಒಳಗಾದ ವ್ಯಕ್ತಿಯನ್ನು ತಕ್ಷಣವೇ ಹತ್ತಿರಡೇ ಆಸ್ಪತ್ರೆಗೆ ಕರೆದೊಯ್ಯಬೇಕು.