ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷವೇ ಕಳೆದಿದೆ. ಆದರೂ ಕೂಡ ಅಭಿಮಾನಿಗಳಿಗಂತೂ ಇನ್ನೂ ನೆನಪು ಹಾಗೆ ಉಳಿದಿದೆ. ಈಗಾಗಲೇ ಅಭಿಮಾನಿಗಳು ಅಪ್ಪು ನೆನಪಿಗಾಗಿ ಸಾಕಷ್ಟು ಸಾಮಾಜಿಕ ಕಾರ್ಯ ಮಾಡಿಕೊಂಡು ಬಂದಿದ್ದಾರೆ.
ಇಂದು (ಅ.29) ಅಪ್ಪು ಫುಣ್ಯ ಸ್ಮರಣೆ ಹಿನ್ನೆಲೆ ರಾಜ್ಯದ ಹಲವೆಡೆ ಅನ್ನದಾನ ಮಾಡುವ ಮೂಲಕ ಈ ದಿನವನ್ನು ಅಭಿಮಾನಿಗಳು ಅಗಲಿದ ನಾಯಕನಿಗೆ ನಮನ ಸಲ್ಲಿಸಿದ್ದಾರೆ. ಬೆಂಗಳೂರು, ಶಿವಮೊಗ್ಗ, ವಿಜಯನಗರ, ಬಾಗಲಕೋಟೆಯಲ್ಲಿ ಅನ್ನದಾನ ನಡೆದಿದ್ದು, ಪುನೀತ್ ಅಭಿಮಾನಿಗಳು ಜನರಿಗೆ ಬಿರಿಯಾನಿ ಹಂಚಿದ್ದಾರೆ . ರಾಜ್ಯದ ಹಲವು ಕಡೆ ಜನರಿಗೆ ಸಸಿಗಳನ್ನು ವಿತರಿಸುವ ಮೂಲಕ ಅಪ್ಪು ಫುಣ್ಯ ಸ್ಮರಣೆ ಮಾಡಿದ್ದಾರೆ.
ಇನ್ನೂ, ಇಂದು ಅವರ ಮೊದಲ ವರ್ಷದ ಪುಣ್ಯಸ್ಮರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅಪ್ಪು ಸಮಾಧಿ ಬಳಿ ಆಗಮಿಸಿದ್ದಾರೆ. ಈ ವೇಳೆ ಅಪ್ಪು ಸಮಾಧಿಗೆ ಕುಟುಂಬದ ಸದಸ್ಯರು ಪೂಜೆ ಸಲ್ಲಿಸಿದರು.
ಬೆಂಗಳೂರಿನ ಕಂಠೀವರ ಸ್ಟುಡಿಯೋ ಬಳಿಯಿರುವ ಅಪ್ಪು ಸಮಾಧಿ ಬಳಿ ಆಗಮಿಸಿದ ರಾಘವೇಂದ್ರ ರಾಜ್ ಕುಮಾರ್, ಶಿವರಾಜ್ ಕುಮಾರ್, ಅಶ್ವಿನಿ , ಗೀತಾ, ಪುನೀತ್ ಸಹೋದರಿಯರು ಪುನೀತ್ ಪುತ್ರಿ ಸೇರಿದಂತೆ ಕುಟುಂಬದ ಸದಸ್ಯರು ಆಗಮಿಸಿದ್ದರು.ಈ ವೇಳೆ ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪತಿಯನ್ನು ನೆನೆದು ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಕುಟುಂಬಸ್ಥರು ಸಹ ಅಪ್ಪು ನೆನದು ಭಾವುಕರಾಗಿದ್ದಾರೆ. ಇನ್ನು ಅಪ್ಪು ನೋಡಲು ಸಮಾಧಿ ಬಳಿ ಅಭಿಮಾನಿಗಳ ದಂಡು ಹರಿದು ಬಂದಿದೆ.
ಪುನೀತ್ ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸಲು ಮನವಿ
ಪುನೀತ್ ರಾಜ್ ಕುಮಾರ್ ಅವರ ಜೀವನ ಮತ್ತು ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮನವಿ ಮಾಡಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿಮಾನಿಗಳು ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಜೀವನ ಮತ್ತೆ ಸಾಧನೆ ಕಥೆಯನ್ನು ಸೇರಿಸಲು ಮನವಿ ಮಾಡಿದ್ದಾರೆ. ಈಗಾಗಲೇ 6ನೇ ತರಗತಿ ಪಠ್ಯ ದಲ್ಲಿ ಡಾ. ರಾಜ್ ಕುಮಾರ್ ಜೀವನ ಸಾಧನೆ ಪಠ್ಯ ಸೇರಿಸಲಾಗಿದೆ. ಅದೆ ರೀತಿ ನಟ ಪುನೀತ್ ರಾಜ್ ಕುಮಾರ್ ಜೀವನ ಸಾಧನೆ ಕಥೆ ಸೇರಿಸಲು ಅಪ್ಪು ಅಭಿಮಾನಿಗಳು ಮನವಿ ಮಾಡಿದ್ದಾರೆ.
BREAKING NEWS : ‘ಆಟೋ ಇಮ್ಯೂನ್ ಕಾಯಿಲೆ’ಯಿಂದ ಬಳಲುತ್ತಿರುವ ಖ್ಯಾತ ನಟಿ ಸಮಂತಾ, ಆಸ್ಪತ್ರೆಗೆ ದಾಖಲು
ಕೊನೆಗೂ ತನಗೆ ಇರೋ ಅನಾರೋಗ್ಯದ ಬಗ್ಗೆ ಮಾಹಿತಿ ಬಿಚ್ಚಿಟ್ಟ ನಟಿ ಸಮಂತಾ…! ಏನದು ಖಾಯಿಲೆ ಗೊತ್ತಾ?