ಬೆಂಗಳೂರು : ಹೃದಯಾಘಾತ ಸಂದರ್ಭದಲ್ಲಿ ಜನರ ಪ್ರಾಣ ರಕ್ಷಣೆ ಮಾಡುವ ನಿಟ್ಟಿನಲ್ಲಿ ಕಳೆದ ವರ್ಷ ಜಾರಿಗೆ ತಂದಿರುವ ಡಾ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆ ಹಲವರ ಮನೆ ಬೆಳಗಿದೆ.
ಹೌದು, ಡಾ. ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಇದುವರೆಗೆ 3 ಲಕ್ಷಕ್ಕೂ ಹೆಚ್ಚು ಮಂದಿಗೆ ಇಸಿಜಿ ಪರೀಕ್ಷೆ ಮಾಡಿ, 5,989 ತೀವ್ರ ಹೃದಯಾಘಾತ ಪ್ರಕರಣಗಳನ್ನು ಪತ್ತೆ ಹಚ್ಚಿ ರೋಗಿಗಳಿಗೆ ಯಶಸ್ವಿ ಚಿಕಿತ್ಸೆ ನೀಡಲಾಗಿದೆ.
ಹೃದಯಾಘಾತಕ್ಕೆ ಒಳಗಾದ ರೋಗಿಗಳ ಪಾಲಿಗೆ ಸಂಜೀವಿನಿಯಾಗಿರುವ “ಟೆನೆಕ್ಟ್ ಪ್ಲಸ್” ಇಂಜೆಕ್ಷನ್ 348 ಮಂದಿ ಜೀವ ಉಳಿಸಿದೆ. “ಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ” ಯೋಜನೆ ಸೇರಿದಂತೆ ಇನ್ನು ಹಲವು ಯೋಜನೆ ಮೂಲಕ ಜನರ ಆರೋಗ್ಯ ಕಾಪಾಡುವ ಪ್ರಯತ್ನ ನಿರಂತರವಾಗಿ ಸಾಗಲಿದೆ.