ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಪುನೀತ್ ರಾಜ್ ಕುಮಾರ್ ನೆನಪಿನಲ್ಲಿ ‘ಪುನೀತ್ ಪರ್ವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ರಾಜ್ಯ ಸರ್ಕಾರದಿಂದ 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಸಿಹಿ ಸುದ್ದಿ: ಪ್ರತಿ ತಿಂಗಳು ಸಿಗಲಿದೆ 2 ಸಾವಿರ ರೂ.ಮಾಸಾಶನ
ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಡಾಕ್ಯುಮೆಂಟರಿ ಮಾದರಿಯ ಸಿನಿಮಾ ಗಂಧದ ಗುಡಿ ಪ್ರಿ ರಿಲೀಸ್ ಇವೆಂಟ್ ಕೂಡ ಇದಾಗಿದ್ದು, ಭಾರತೀಯ ಸಿನಿಮಾ ರಂಗದ ಅನೇಕ ದಿಗ್ಗಜರು ಸಮಾರಂಭದಲ್ಲಿ ಭಾಗಿ ಆಗುತ್ತಿದ್ದಾರೆ. ಅಲ್ಲದೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಆಹ್ವಾನ ನೀಡಲಾಗಿದೆ.
ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಮಾತ್ರವಲ್ಲ, 40 ಸಾವಿರಕ್ಕೂ ಅಧಿಕ ಅಭಿಮಾನಿಗಳು ಕೂಡ ಈ ಕಾರ್ಯಕ್ರಮಕ್ಕೆ ಸಾಕ್ಷಿ ಆಗಿರುವುದರಿಂದ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ರಾಜ್ಯ ಸರ್ಕಾರದಿಂದ 60 ವರ್ಷ ಮೇಲ್ಪಟ್ಟ ದೈವ ನರ್ತಕರಿಗೆ ಸಿಹಿ ಸುದ್ದಿ: ಪ್ರತಿ ತಿಂಗಳು ಸಿಗಲಿದೆ 2 ಸಾವಿರ ರೂ.ಮಾಸಾಶನ
ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುವುದಕ್ಕಾಗಿ ಬೆಂಗಳೂರು ಪೊಲೀಸರು ಭಾರೀ ಸಿದ್ದತೆಯನ್ನೇ ಮಾಡಿಕೊಂಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಡಿಸಿಪಿ ಶ್ರೀನಿವಾಸ್ ಗೌಡ, 1400 ಪೊಲೀಸರ್, 180 ಪಿಎಸ್.ಐ, 60 ಇನ್ಸೆಪೆಕ್ಟರ್, 14 ಎಸಿಪಿ ಹಾಗೂ 3 ಮಂದಿ ಡಿಸಿಪಿಗಳನ್ನು ನಿಯೋಜಿಸಲಾಗಿದೆ. ಅಷ್ಟೇ ಅಲ್ಲದೇ, 20 ಕೆ.ಎಸ್.ಆರ್ಪಿ ತುಕಡಿ ಕೂಡ ಆ ಸ್ಥಳದಲ್ಲಿ ಇರಲಿದೆ. ಕಾರ್ಯಕ್ರಮವನ್ನು ವೀಕ್ಷಿಸಲು ಬರುವ ಅಭಿಮಾನಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕೂಡ ಮಾಡಲಾಗಿದ್ದು, ಪಾಸ್ ಇದ್ದವರಿಗೆ ಪ್ರವೇಶವನ್ನು ಕಲ್ಪಿಸಲಾಗಿದೆ.