ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ( Actor Puneeth Rajkumar ) ಇಂದು ವಿಧಾನಸೌಧದ ಮುಂಭಾಗದ ಮೆಟ್ಟಿಲಿನ ಮೇಲೆ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಆಗಮಿಸೋ ಮುನ್ನ, ಸಿಎಂ ಬಸವರಾಜ ಬೊಮ್ಮಾಯಿ ಅವರು ಏನು ಮಾತನಾಡಿದ್ರು ಅಂತ ಮುಂದೆ ಓದಿ.
ಕರ್ನಾಟಕ ರತ್ನ ಪ್ರಶಸ್ತಿ ( Karnataka Ratna Award 2022 ) ಪ್ರದಾನ ಸಮಾರಂಭಕ್ಕೂ ಮುನ್ನ ವಿಧಾನಸೌಧದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಬಸವರಾಜ ಬೊಮ್ಮಾಯಿ ಅವರು, ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಪುನೀತ್ ರಾಜ್ ಕುಮಾರ್ ಹೆಚ್ಚು ಅಭಿಮಾನಿಗಳನ್ನು ಹೊಂದಿದ್ದಾರೆ. ಈ ಹಿಂದೆ ಡಾ.ರಾಜ್ ಕುಮಾರ್ ಅವರು ಈ ಪ್ರಶಸ್ತಿಗೆ ಭಾಜನರಾಗಿದ್ದರು ಎಂದು ಹೇಳಿದರು.
ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುತ್ತಿರುವುದು ಜನತೆ ಇದನ್ನು ದೀರ್ಘಕಾಲ ನೆನಪಿಟ್ಟುಕೊಳ್ಳುವ ವಿಷಯವಾಗಿದೆ. ಅವರು ಸಾಕಷ್ಟು ಸೇವೆ ಮಾಡಬೇಕಿತ್ತು. ಆದ್ರೇ ಅವರ ಅಕಾಲಿಕ ನಿಧನದಿಂದ ಸಾಧ್ಯವಾಗಲಿಲ್ಲ. ಕನ್ನಡ ಜನತೆಯ ಆಸೆಯನ್ನು ಇಂದು ನೆರವೇರಿಸುತ್ತಿದ್ದೇವೆ. ಪ್ರೀತಿಯ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿದರು.