ಬೆಂಗಳೂರು: ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರವಾಗಿ ನವೆಂಬರ್ 1 ರಂದು ವಿಧಾನಸೌಧದಲ್ಲಿ ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಅತಿ ಚಿಕ್ಕ ವಯಸ್ಸಿನಲ್ಲಿ ಈ ಪ್ರಶಸ್ತಿ ಪಡೆಯುತ್ತಿರುವ ರತ್ನ ಪುನೀತ್ ರಾಜ್ಕುಮಾರ್ ಅವರಿಗೆ ಸಲ್ಲುತ್ತದೆ. ಕಾರ್ಯಕ್ರಮಕ್ಕೆ ಸೂಪರ್ ಸ್ಟಾರ್ ರಜನಿಕಾಂತ್, ಜ್ಯೂನಿಯರ್ ಎನ್ಟಿ ಆರ್ ಅವ್ರಿಗೆ ಆಹ್ವಾನ ನೀಡಲಾಗಿದೆ. ಅವರು ಕೂಡ ಭಾಗಿಯಾಗ್ತಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ್ ಕಂಬಾರರು, ರಾಜ್ಕುಮಾರ್ ಕುಟುಂಬದವರು ಭಾಗಿಯಾಗ್ತಾರೆ ಎಂದು ತಿಳಿಸಿದ್ದಾರೆ.