ಬೆಂಗಳೂರು : ನಟ ಪುನೀತ್ ರಾಜ್ಕುಮಾರ್ ನವೆಂಬರ್ 1 ರ ನಾಳೆ ವಿಧಾನಸೌಧದ ಎದುರು ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಪ್ರಶಸ್ತಿಯನ್ನು ಪುನೀತ್ ಪತ್ನಿ ಅಶ್ವಿನಿ ಅವರು ಸ್ವೀಕಾರ ಮಾಡಲಿದ್ದಾರೆ. ಈ ಬಗ್ಗೆ ಮಾತನಾಡಿದ ಕರ್ನಾಟಕ ರತ್ನ ಪ್ರಶಸ್ತಿ ಉಸ್ತುವಾರಿ ಸಮಿತಿ ಅಧ್ಯಕ್ಷ ಹಾಗೂ ಕಂದಾಯ ಇಲಾಖೆ ಸಚಿವ ಆರ್.ಅಶೋಕ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ 20 ಸಾವಿರ ಜನ ಸೇರುವ ಸಾಧ್ಯತೆ ಇದೆ. ನಾಳೆ ಸಂಜೆ 4 ಗಂಟೆಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಈ ಕಾರ್ಯಕ್ರಮದಲ್ಲಿ ಖ್ಯಾತ ನಟರಾದ ರಜನಿಕಾಂತ್ ಜೂನಿಯರ್ ಎನ್ಟಿಆರ್, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರನ್ನು ಆಹ್ವಾನಿಸಲಾಗಿದೆ.
ಬೆಂಗಳೂರಿನ ನಾಗರಿಕರಿಗೆ 5 ಸಾವಿರ ಪಾಸ್ ವಿತರಣೆ ಮಾಡಲಾಗುತ್ತಿದ್ದು, ಇಂದು ನಟ ಪುನೀತ್ ರಾಜ್ಕುಮಾರ್ ನಿವಾಸಕ್ಕೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ ಎಂದರು. ವಿಧಾನಸೌಧದ ಎದುರು ನಾಳೆ ಸಂಜೆ 4 ಗಂಟೆಗೆ ಈ ಸಮಾರಂಭ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ವಿಧಾನಸೌಧದ ಮುಂಭಾಗದ ರಸ್ತೆಯನ್ನು ಬ್ಲಾಕ್ ಮಾಡಲಾಗುತ್ತಿದೆ.