ಬೆಂಗಳೂರು: ಇಂದು ನಟ ಪುನೀತ್ ರಾಜ್ ಕುಮಾರ್ ಅವರಿಗೆ 50ನೇ ವರ್ಷದ ಹುಟ್ಟು ಹಬ್ಬ. ಈ ಸಂದರ್ಭದಲ್ಲಿ ಸಹೋದರ ರಾಘವೇಂದ್ರ ರಾಜ್ ಕುಮಾರ್ ಅವರು ಪವರ್ ಸ್ಟಾರ್ ಕುಟುಂಬದ ಅಪರೂಪದದ ವೀಡಿಯೋವೊಂದನ್ನು ರಿಲೀಸ್ ಮಾಡಿದ್ದಾರೆ.
ಇಂದು ಅಪ್ಪು ಹುಟ್ಟು ಹಬ್ಬದ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳ ಕಂಠೀರವ ಸ್ಟೂಡಿಯೋದಲ್ಲಿ ಅಭಿಮಾನಿಗಳ ದಂಡೇ ನೆರೆದಿದೆ. ಇಂದು ಬೆಳಿಗ್ಗೆಯಿಂದ ಅಪ್ಪು ಸಮಾಧಿಗೆ ನಮನ ಸಲ್ಲಿಸುತ್ತಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರ ಸಮಾಧಿ ಸ್ಥಳವನ್ನು ಬಗೆ ಬಗೆಯ ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿದೆ. ದೇವಸ್ಥಾನದ ಮಾದರಿಯಲ್ಲಿ ಮಂಡವನ್ನು ಅಲಂಕರಿಸಲಾಗಿದೆ.
50ನೇ ಹುಟ್ಟು ಹಬ್ಬ ಹಿನ್ನಲೆಯಲ್ಲಿ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್ ದಂಪತಿ, ರಾಘಣ್ಣ ದಂಪತಿ ಮತ್ತು ಮಕ್ಕಳು ಸೇರಿದಂತೆ ರಾಜ್ ಕುಟುಂಬದ ಹಲವರು ಅಪ್ಪು ಸ್ಮಾರಕಕ್ಕೆ ಪೂಜೆ ಸಲ್ಲಿಸಿದರು.
ಇನ್ನೂ ಡಾ.ಪುನೀತ್ ರಾಜ್ ಕುಮಾರ್ 50ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ ರಾಘವೇಂದ್ರ ರಾಜ್ ಕುಮಾರ್ ಅವರು ಡಾ.ರಾಜ್ ಕುಮಾರ್ ಫ್ಯಾಮಿಲಿಯ ವಿಶೇಷ ಪೋಟೋಗಳಿರುವಂತ ವೀಡಿಯೋ ಶೇರ್ ಮಾಡಿದ್ದಾರೆ. ಆ ಮೂಲಕ ಮರೆಯಲಾಗದ ಮಾಣಿಕ್ಯ ಅಪ್ಪುವನ್ನು ನೆನಪು ಮಾಡಿಕೊಂಡಿದ್ದಾರೆ.
ಶುಭೋದಯ
ಶುಭವಾಗಲಿ
ಜೈ ಆಂಜನೇಯ
ಜೈ ಗುರುದೇವ್ 🙏🙏🙏 pic.twitter.com/qAucapfO2l— Raghavendra Rajkumar (@iRaghanna) March 17, 2025
ಇಂದು ಪುನೀತ್ ರಾಜ್ ಕುಮಾರ್ ಜನ್ಮದಿನ: ಶುಭ ಕೋರಿದ ಶಾಸಕ ಗೋಪಾಲಕೃಷ್ಣ ಬೇಳೂರು
ಬೆಳಗಾವಿ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ: ಯುವಕರ ಗುಂಪಿನಿಂದ ವ್ಯಕ್ತಿ ಮೇಲೆ ಹಲ್ಲೆ, ನಾಲ್ವರು ಅರೆಸ್ಟ್