ಬೆಂಗಳೂರು : ರಾಜ್ಯದಲ್ಲಿ ಬಡವರಿಗಾಗಿಯೇ ಎಂದು ಅನ್ನ ಭಾಗ್ಯ ಯೋಜನೆ ಜಾರಿಗೊಳಿಸಲಾಗಿದೆ.ಆದರೆ ಕೆಲವು ಪ್ರಭಾವಿ ವ್ಯಕ್ತಿಗಳಿಂದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಳ್ಳ ಸಾಗಾಣಿಕೆ ಮೂಲಕ ಹೊರ ರಾಜ್ಯಗಳಿಗೂ ಮಾರಾಟ ಮಾಡಲಾಗುತ್ತಿದೆ. ಹೀಗಾಗಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಹೋಟೆಲ್ ಗಳಿಗೆ ಮಾರುವ ಆಯೋಗ್ಯರನ್ನು ಶಿಕ್ಷಿಸಿ ಎಂದು ಹೈಕೋರ್ಟ್ ಕಿಡಿ ಕಾರಿದೆ.
ಬಡವರಿಗಾಗಿ ರೂಪಿಸಲಾಗಿರುವ ‘ಅನ್ನಭಾಗ್ಯ’ ನೆಯ ಅಕ್ಕಿಯನ್ನು ಹೋಟೆಲ್‌ಗಳಿಗೆ ಮಾರುವ ಅಯೋಗ್ಯರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ. ಪ್ರಕರಣವೊಂದರ ವಿಚಾರಣೆ ವೇಳೆ ನ್ಯಾಯ ಮೂರ್ತಿ ವಿ.ಶ್ರೀಷಾನಂದ ಅವರ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮ ವಾಗಿ ಹೋಟೆಲ್‌ಗಳಿಗೆ ಮಾರಾಟ ಮಾಡುವ ಮಾಫಿಯಾ ಬಗ್ಗೆ ತೀವ್ರವಾಗಿ ಕಿಡಿಕಾರಿದರು.
ಹೌದು ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕಿಡಿಕಾರಿದ್ದು, ಕಳಸಾಗನೇ ಮೂಲಕ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುವ ಡಾನ್ ಗಳನ್ನು ರಾಜಕಾರಣಿಗಳು ರಕ್ಷಿಸುತ್ತಾರೆ.ಕಾನೂನನ್ನು ಎಷ್ಟೇ ಕಠಿಣಗೊಳಿಸಿದರು ಕೂಡ ನಿನ್ನ ಮೊಣಕೈಗೆ ಹತ್ತಿರುವ ಜೇನು ಯೋಜನೆ ನ್ಯಾಯಪೀಠ, ತುಪ್ಪವನ್ನು ನಾನು ನೆಕ್ಕುತ್ತೇನೆ, ನನ್ನ ಮೊಣಕೈಗೆ ಮೆತ್ತಿರುವ ಜೇನುತುಪ್ಪವನ್ನು ನೀನು ನೆಕ್ಕು ಎಂಬಂತಹ ಮಟ್ಟಕ್ಕೆ ಇಳಿದಿದ್ದಾರೆ ಎಂದು ಕಿಡಿಕಾರಿದರು.
ಯಾರೋ ಕೆಲವು ಅದೃಷ್ಟವಂತರು ಹಿಂದ್ರ ತಮ್ಮ ತಂದೆ ತಾತದಿಂದ ಮಾಡಿದಂತ ಪುಣ್ಯದ ಕೆಲಸದಿಂದ ಸಮಾಜದಲ್ಲಿ ಉತ್ತಮ ಸ್ಥಾನಮಾನ ಅನುಭವಿ ಸುತ್ತಾ ಇದ್ದಾರೆ. ಬಡವರಿಗೆ ಅಂತಹ ಭಾಗ್ಯ ಇರುವುದಿಲ್ಲ. ಅನ್ನಭಾಗ್ಯದಲ್ಲಿ ಜನರ ದುಡ್ಡು ಅಡಗಿರುತ್ತದೆ. ಸರ್ಕಾರ ಅದಕ್ಕೆ ಸಬ್ಸಿಡಿ ನೀಡುವ ಮೂಲಕ ಬಡವರ ಉದ್ಧಾರಕ್ಕೆ ಎಂದು ಯೋಜನೆ ಜಾರಿ ಗೊಳಿಸಿರುತ್ತದೆ. ಅನ್ನಭಾಗ್ಯದಂತಹ ಜನಪರ ಯೋಜನೆ ನಿಜವಾದ ಬಡವರಿಗೆ ತಲುಪಬೇಕು. ಹಾಗಾಗಿ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನ್ಯಾಯಪೀಠ ಸೂಚನೆ ನೀಡಿತು.