ಮೊಹಾಲಿ (ಪಂಜಾಬ್) : ಮೊಹಾಲಿ ಏರ್ಪೋರ್ಟ್ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಮೊಹಾಲಿ ಸಿಟಿ ಸೆಂಟರ್ನಲ್ಲಿ ನಿರ್ಮಾಣ ಹಂತದಲ್ಲಿರುವ ಶೋರೂಮ್ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ʻನಿರ್ಮಾಣ ಹಂತದಲ್ಲಿರುವ ಕಟ್ಟಡದ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ಎಂಟು ಕಾರ್ಮಿಕರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದಾರೆʼ ಎಂದು ರೂಪನಗರ ರೇಂಜ್ ಪೊಲೀಸರು ಟ್ವೀಟ್ ಮಾಡಿದ್ದಾರೆ.
BIGG NEWS : ಹಾವೇರಿಯಲ್ಲಿ 86 `ಅಖಿಲ ಭಾರತ ಕನ್ನಡ ಸಾಹಿತ್ಯ’ ಮತ್ತೆ ಮುಂದೂಡಿಕೆ!
BIGG NEWS : `ಬಗರ್ ಹುಕುಂ’ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್
BIGG NEWS : `CET’ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ : ಇಂದು ಸೀಟು ವಿವರ ಪ್ರಕಟ